ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಶಾಸಕ ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ ನ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿಯವರ ೬೭ನೇ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅ.೧೧ ರಂದು ಪಟ್ಟಣದಲ್ಲಿ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ.
ಬೆಳಿಗ್ಗೆ ೧೦ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ, ೧೧ಕ್ಕೆ ಪಟ್ಟಣದ ಬಸ್ ನಿಲ್ದಾಣದ ಎದುರಿನ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣು ತಪಾಸಣೆ, ಮಧ್ಯಾಹ್ನ ೧೨ಕ್ಕೆ ನಿರ್ಗತಿಕರಿಗೆ ಹಾಸಿಗೆ ಕಿಟ್ ವಿತರಣೆ ಸಂಜೆ ೬ಕ್ಕೆ ಪಟ್ಟಣದ ಹುಡಕೋ ಕಾಲೋನಿಯ ಗ್ರಾಮದೇವತೆ ಕುಸ್ತಿ ಮೈದಾನದಲ್ಲಿ ಹುಟ್ಟು ಹಬ್ಬಕ್ಕೆ ಶುಭಕೋರುವ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಇಂಗಳೇಶ್ವರದ ಚನ್ನಬಸವ ಮಹಾಸ್ವಾಮಿಗಳು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು, ತಾಳಿಕೋಟೆಯ ಖಾಸ್ಗತೇಶ್ವರಮಠದ ಬಾಲ ಶಿವಯೋಗಿ ಸಿದ್ಧಲಿಂಗದೇವರು ವಹಿಸುವರು.
