ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮಂಡ್ಯ ಜಿಲ್ಲೆಯಲ್ಲಿ ಮುಂಬರುವ ಡಿಸೆಂಬರ್ ತಿಂಗಳ ೨೦,೨೧,೨೨ನೇ ದಿನಾಂಕಗಳಂದು ಜರುಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ಪಟ್ಟಣಕ್ಕೆ ಕನ್ನಡ ಜ್ಯೋತಿ ರಥಯಾತ್ರೆ ಆಗಮಿಸಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜನರಲ್ಲಿ ಸಾಹಿತ್ಯಕ ಅಭಿಮಾನವನ್ನು ಮೂಡಿಸುವ ಅಂಗವಾಗಿ ಇಂದು ಮಧ್ಯಾನ್ಹ ೩ ಗಂಟೆಗೆ ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಸ್ವಾಗತ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘ ಸಂಸ್ಥೆಗಳು, ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.
