Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮಂಡ್ಯದಲ್ಲಿ ಡಿ.೨೦,೨೧,೨೨ ರಂದು ನಡೆಯಲಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯು ನಿಡಗುಂದಿ ಪಟ್ಟಣದಿಂದ ಮಂಗಳವಾರ ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಆಗಮಿಸುತ್ತಿದ್ದಂತೆ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸುವ ಮೂಲಕ ತಾಲೂಕಾಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವೃತ್ತದಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಭವ್ಯವಾಗಿ ಸ್ವಾಗತಿಸಿಕೊಂಡರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆ ಗಣಪತಿ ಚೌಕ್ ಮಾರ್ಗವಾಗಿ ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತಕ್ಕೆ ಆಗಮಿಸಿತು.
ಈ ಸಂದರ್ಭದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಉದ್ದೇಶಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಇಂದಿನ ಯುವಜನಾಂಗಕ್ಕೆ ಕನ್ನಡ ನಾಡು-ನುಡಿಯ ಬಗ್ಗೆ ಜಾಗೃತಿ ಮೂಡಿಸಲು ಈ ರಥಯಾತ್ರೆಯು ನಾಡಿನಲ್ಲಿ ಸಂಚರಿಸುತ್ತಿದೆ. ಆಡಳಿತ ಭಾಷೆಯಾಗಿರುವ ಕನ್ನಡ ಸಂರಕ್ಷಣೆ ಮಾಡುವ ಜೊತೆಗೆ ಅದನ್ನು ಬೆಳೆಸುವ ಅಗತ್ಯವಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಮಾತನಾಡಿ, ಕನ್ನಡ ಜಾಗೃತಿ ಮೂಡಿಸಲು ಈ ರಥ ಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ರಾಜ್ಯ ಸಂಘಟನಾ ಕಾರ್ಯದರ್ಶಿ, ಅವಳಿ ಜಿಲ್ಲೆಯ ಉಸ್ತುವಾರಿ ಅಶೋಕ ಹಾರಿವಾಳ ಮಾತನಾಡಿ, ಕನ್ನಡಿಗರಿಂದಲೇ ಕನ್ನಡಕ್ಕೆ ಅಪಮಾನವಾಗುತ್ತಿರುವುದು ವಿಷಾದಕರ ಸಂಗತಿ. ಕನ್ನಡ ಕಟ್ಟುವ ಕೆಲಸ ನಾಡಿನಲ್ಲಿ ನಿರಂತರವಾಗಿ ನಡೆಯಬೇಕೆಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಆರ್.ಜಿ.ಅಳ್ಳಗಿ, ಅಭಿಷೇಕ ಚಕ್ರವರ್ತಿ, ಬಿಎಲ್ಡಿಇ ಸಂಸ್ಥೆಯ ಕಾಲೇಜು ವಿದ್ಯಾರ್ಥಿನಿ ಸೃಷ್ಟಿ ಹಂಗರಗಿ ಇತರರು ಮಾತನಾಡಿದರು.
ರಥ ಯಾತ್ರೆ ಮೆರವಣಿಗೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಂ.ಎಸ್.ಹಿರೇಮನಿ, ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಶಾಂತಾ ನಿಂಬಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದ್ಯಾಶ್ಯಾಳ, ಪಿಎಸ್ಐ ಐ.ಎಂ.ದುಂಡಸಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ.ಮರ್ತುರ, ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ವ್ಯವಸ್ಥಾಪಕ ಸಿ.ಜಿ.ಬಿರಾದಾರ, ಎಸಿಡಿಪಿಓ ಬಸವರಾಜ ನಿಲುಗಲ್, ಶಿರಸ್ತೇದಾರ ಮಹೇಶ ಬಳಗಾನೂರ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಪುರಸಭೆ ಆರೋಗ್ಯ ನಿರೀಕ್ಷಕ ವಿಜಯಕುಮಾರ ವಂದಾಲ, ಮಹೇಶ ಹಿರೇಮಠ, ಸಿಆರ್ಪಿ ಬಸವರಾಜ ಚನ್ನಗೊಂಡ, ಜಿಲ್ಲಾ ಚುಟುಕು ಸಾಹಿತ್ಯ ಪರಿಷ್ತತಿನ ಅಧ್ಯಕ್ಷ ಜಗದೀಶ ಸಾಲಳ್ಳಿ, ನಂದಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಹಾಂತೇಶ ಸಂಗಮ, ತಾಲೂಕು ಕಸಾಪ ಪದಾಧಿಕಾರಿಗಳಾದ ಯಮನಪ್ಪ ಮಿಣಜಗಿ, ಬಿ.ವಿ.ಚಕ್ರಮನಿ, ಬಸವರಾಜ ಮೇಟಿ, ಬಿ.ಎಂ.ಚಿಂಚೋಳಿ, ನಿವೃತ್ತ ಶಿಕ್ಷಕರಾದ ಎಂ.ಜಿ.ಆದಿಗೊಂಡ, ಸಿ.ಎಲ್.ಮುರಾಳ, ಸಾಹಿತಿಗಳಾದ ಪ್ರಭಾಕರ ಖೇಡದ, ಕಾಶೀನಾಥ ಅವಟಿ, ಶಿಕ್ಷಕರಾದ ಎಚ್.ಬಿ.ಬಾರಿಕಾಯಿ, ಸಿದ್ದು ಬಾಗೇವಾಡಿ, ಬಿ.ಪಿ.ನಾಗಾವಿ, ಎಸ್.ವಿ.ಗೋಕಾವಿ, ಸುಭಾಸ ಹಡಪದ, ಪಿ.ಎಸ್.ಬಾಗೇವಾಡಿ, ಡಿಎಸ್ಎಸ್ ಮುಖಂಡರಾದ ಮಹಾಂತೇಶ ಸಾಸಾಬಾಳ, ಪರಶುರಾಮ ದಿಂಡವಾರ, ಅಶೋಕ ಚಲವಾದಿ, ಕರವೇ (ನಾರಾಯಣಗೌಡಬಣ)ದ ಕಾರ್ಯಕರ್ತರಾದ ಕಲ್ಲಪ್ಪ ಚಟೇರ, ಹಣಮಂತ ಟಕ್ಕಳಕ್ಕಿ, ಮುತ್ತು ಚವ್ಹಾಣ, ಬಸವರಾಜ ಕುಬಕಡ್ಡಿ, ಕರವೇ(ಸ್ವಾಭಿಮಾನಿ ಬಣ)ದ ಕಾರ್ಯಕರ್ತರಾದ ಮಹಾಂತೇಶ ಚಕ್ರವರ್ತಿ, ಸುನೀಲ ರಾಠೋಡ, ರಾಜು ಬಿರಾದಾರ, ಶಿವಾನಂದ ಚವ್ಹಾಣ, ಗುರು ಚವ್ಹಾಣ, ಶಾಂತಗೌಡ ಬಿರಾದಾರ, ಬಿಎಲ್ಡಿಇ ಸಂಸ್ಥೆಯ ಪದವಿ, ಪಪೂ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ದಾಹದಿಂದ ಬಸವಳಿದ ವಿದ್ಯಾರ್ಥಿಗಳು

ಬಸವೇಶ್ವರ ವೃತ್ತದಲ್ಲಿ ರಥಯಾತ್ರೆಯು ಆಗಮಿಸಿದ್ದ ಸಂದರ್ಭದಲ್ಲಿ ಪ್ರಖರ ಬಿಸಿಲಿನಿಂದ ಮೆರವಣಿಗೆಯಲ್ಲಿ ಭಾಗವಹಿಸಿ ಬಸವಳಿದ ವಿದ್ಯಾರ್ಥಿಗಳಿಗೆ ನೀರಿನ ವ್ಯವಸ್ಥೆ ಮಾಡಬೇಕಿತ್ತು ಎಂದು ಬಿಎಲ್ಡಿಇ ಸಂಸ್ಥೆಯ ಕಾಲೇಜಿನ ಆರ್.ಆರ್.ಮುಜಾವರ, ಆರ್.ಬಿ.ರಾಠೋಡ, ಡಾ.ವೈ.ಬಿ.ನಾಯಕ ತಮ್ಮ ಅಭಿಪ್ರಾಯ ಹಂಚಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.