ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ ಕಾಯಕ ಸ್ಪೂರ್ತಿ(ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಚರ್ಮಕಾರರ ಕಿರು ಆರ್ಥಿಕ ನೇರ ಸಾಲ ಯೋಜನೆ, ನೇರ/ಸಂಚಾರಿ ಮಾರಾಟ ಯೋಜನೆ ಸೌಲಭ್ಯಗಳನ್ನು ಪಡೆಯಲು ಆನ್‌ಲೈನ್ ಅರ್ಜಿ ಅಹ್ವಾನಿಸಲಾಗಿದೆ.
ಸೇವಾ ಸಿಂಧೂ, ಗ್ರಾಮ ಒನ್, ಕರ್ನಾಟಕ ಒನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ೩೦-೧೦-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಿದವರು ಆನ್‌ಲೈನ್ ಅರ್ಜಿಯ ರಶೀದಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಿಡ್ಕರ್ ಕಚೇರಿಗೆ ಸಲ್ಲಿಸಬಹುದು ಎಂದು ವಿಜಯಪುರದ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮಮದ ಜಿಲ್ಲಾ ಸಂಯೋಜಕರ ಪ್ರಕಟಣೆ ತಿಳಿಸಿದೆ.
