ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಿದರು.
ಈ ವೇಳೆ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಜಿ.ಎನ್. ಮಲಜಿ, ಜಿಲ್ಲಾ ಆಸ್ಪತ್ರೆಯ ಸಹಾಯಕ ಆಡಳಿತ ಅಧಿಕಾರಿ ಸಿಂದಗಿಕರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

