ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಇಂಡಿ, ಚಡಚಣ, ಸಿಂದಗಿ, ವಿಜಯಪುರ(ಗ್ರಾ), ವಿಜಯಪುರ(ನ), ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಖಾಲಿ ಇರುವ ಅಂಗನವಾಡಿ ಕಾಯಕರ್ತೆ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ೩೧೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೮೫೭ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿದ್ದು, ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
