ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಹತ್ತರಕಿಹಾಳ ಗ್ರಾಮದ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಅ. ೧೨ ರಂದು ಬೆಳಗ್ಗೆ ೧೦.೩೦ ಗಂಟೆಗೆ ಶ್ರೀರಾಮ, ಲಕ್ಷ್ಮಣ, ಸೀತಾ, ಹನುಮ ಮತ್ತು ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ನಾಡದೇವಿಯ ಆರಾಧನೆಯಂಗವಾಗಿ ಧರ್ಮ ಸಭೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಮನಗೂಳಿಯ ಅಭಿನವ ಸಂಗನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಕಲಬುರ್ಗಿಯ ಶಂಕ್ರೆಮ್ಮ ತಾಯಿಯವರು ವಹಿಸುವರು. ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಹಿಸುವರು. ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೋಮನಗೌಡ ಪಾಟೀಲ ಮನಗೂಳಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕಲ್ಲು ದೇಸಾಯಿ ಆಗಮಿಸುವರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಹನುಮ, ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಮೆರವಣಿಗೆ ಕಾರ್ಯಕ್ರಮಕ್ಕೂ ಮುನ್ನ ಪೂರ್ಣಕುಂಭ ಮೇಳದೊಂದಿಗೆ ನಡೆಯಲಿದೆ ಎಂದು ಗ್ರಾಮದ ಈರಣ್ಣ ಕಲ್ಯಾಣಿ ತಿಳಿಸಿದ್ದಾರೆ.
