ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರದಂದು ಜರುಗಿದ ಅಂತರ್ ವಲಯ ಮಟ್ಟದ ಪುರುಷರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಬಿಎಡ್ ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ವಿಜಯಶಾಲಿಗಳಾಗುವ ಮೂಲಕ ಚಾಂಪಿಯನ್‌ರಾಗಿ ಹೊರಹೊಮ್ಮಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಕಾಲೇಜು ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.

