ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಿನಾಂಕ ೦೮-೦೯-೨೦೨೪ರಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೈರಾಗಿರುವ ಸಿಂದಗಿಯ ಪುರಸಭೆಯ ಮುಖ್ಯಾಧಿಕಾರಿ ಸುರೇಶ ನಾಯಕ ಅಮಾನತಿಗೆ ಸೂಚಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ನಜರಚೂಕಿನಿಂದ/ಕಣ್ತಪ್ಪಿನಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತಿಗೆ ಸೂಚಿಸಿದ್ದಾರೆ ಎಂದು ಸುದ್ದಿ ಬಿಡುಗಡೆಯಾಗಿತ್ತು. ಇದನ್ನು ಪುರಸಭೆಯ ಮುಖ್ಯಾಧಿಕಾರಿ ಸುರೇಶ ನಾಯಕ ಅವರನ್ನು ಅಮಾನತಿಗೆ ಸೂಚನೆ ನೀಡಿದ್ದಾರೆ ಎಂದು ತಿದ್ದುಪಡಿಯಾಗಿ ಮರು ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
