ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಇವರ ವತಿಯಿಂದ ಅಂಗವಿಕಲರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ, ಹಾಗೂ ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ೧೫-೧೦-೨೦೨೪ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾತಯ ಆವರಣ ಅಥವಾ ದೂರವಾಣಿ ಸಂಖ್ಯೆ: ೦೮೩೫೬-೭೯೬೦೬೦ಗೆ ಅಥವಾ WWW.dwdsc.kar.nic.in ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಸವಿತಾ ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
