Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ನಾಗೇಂದ್ರ ವಾಲ್ಮೀಕಿ ಹಗರಣದ ಮಾಸ್ಟರ್ ಮೈಂಡ್ :ಇಡಿ
(ರಾಜ್ಯ ) ಜಿಲ್ಲೆ

ಬಿ.ನಾಗೇಂದ್ರ ವಾಲ್ಮೀಕಿ ಹಗರಣದ ಮಾಸ್ಟರ್ ಮೈಂಡ್ :ಇಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ “ಮಾಸ್ಟರ್‌ಮೈಂಡ್” ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ | ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ

ನವದೆಹಲಿ: ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ “ಮಾಸ್ಟರ್‌ಮೈಂಡ್” ಆಗಿದ್ದು, ಈ ಹಿಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗೆ ರಾಜ್ಯ ಸರ್ಕಾರದ ಸಂಸ್ಥೆಯಿಂದ ಬೇರೆಡೆಗೆ ವರ್ಗಾಯಿಸಲಾದ ಹಣವನ್ನು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ಸಂಸ್ಥೆಯೂ ಪ್ರಾಸಿಕ್ಯೂಷನ್ ದೂರು ಅಥವಾ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿಸಿದೆ.
ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಇಡಿ ಹೇಳಿದೆ.
ಮಾಜಿ ಸಚಿವ ಬಿ ನಾಗೇಂದ್ರ
ವಾಲ್ಮೀಕಿ ಹಗರಣ: ಇಡಿ ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಕಿಂಗ್‌ಪಿನ್
”ಸತ್ಯನಾರಾಯಣ ವರ್ಮ, ಏಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕೆಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ” ಅವರಂತಹ ಪ್ರಮುಖ ಸಹಚರರು ಸೇರಿದಂತೆ 24 ಮಂದಿಯ ಸಹಾಯದಿಂದ ಈ ಹಗರಣ ನಡೆದಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪ್ರಾಥಮಿಕ ಆರೋಪಿ ಮತ್ತು ಮಾಸ್ಟರ್ ಮೈಂಡ್ ಎಂದು ಹೆಸರಿಸಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
“ಬಿ ನಾಗೇಂದ್ರ ಅವರ ಪ್ರಭಾವದಿಂದ ನಿಗಮದ(ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ) ಖಾತೆಯನ್ನು ಯಾವುದೇ ಸರಿಯಾದ ಅನುಮತಿಯಿಲ್ಲದೆ ಎಂಜಿ ರಸ್ತೆಯ ಶಾಖೆಗೆ ವರ್ಗಾಯಿಸಲಾಗಿದೆ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಹಣದ ಅಕ್ರಮ ವರ್ಗಾವಣೆಯಲ್ಲಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ.
2024ರ ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನು ಬೆಂಬಲಿಸಲು ಹಾಗೂ ಬಿ ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕಾಗಿ 20.19 ಕೋಟಿ ರೂ.ಗಳನ್ನು ಬಳಸಲಾಗಿದೆ ಎಂದು ಇಡಿ ಹೇಳಿದೆ.
ನಾಗೇಂದ್ರ ಅವರ ಸೂಚನೆಯಂತೆಯೇ ಸಂಪೂರ್ಣವಾಗಿ ಹಣಕಾಸು ವಹಿವಾಟು ನಡೆದಿದೆ. ತಾನು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಈ ವೆಚ್ಚಗಳ “ಸಾಕ್ಷ್ಯ” ಪತ್ತೆಯಾಗಿದೆ ಮತ್ತು ಆರ್ಥಿಕ ವಿಶ್ಲೇಷಣೆ ಮತ್ತು ಹೇಳಿಕೆಗಳಿಂದ ಇದನ್ನು “ದೃಢೀಕರಿಸಲಾಗಿದೆ” ಎಂದು ಇಡಿ ತಿಳಿಸಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿಇಡಿ ಅಧಿಕಾರಿಗಳು ಜುಲೈ 11ರಂದು ನಾಗೇಂದ್ರರನ್ನು ಬಂಧಿಸಿದ್ದರು. ಅಂದಿನಿಂದ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಆಗಸ್ಟ್‌ನಲ್ಲಿ ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ನಾಗೇಂದ್ರರ ಹೆಸರನ್ನು ಉಲ್ಲೇಖಿಸದೆ ಕೇವಲ ಅಧಿಕಾರಿಗಳ ಪಾತ್ರದ ಕುರಿತ ವಿವರ ದಾಖಲಿಸಿದ್ದರು. ಆದರೆ, ಇಡಿ ಅಧಿಕಾರಿಗಳು ಎಸ್‌ಐಟಿ ತನಿಖೆಗೆ ವಿರುದ್ಧವಾಗಿ ನಾಗೇಂದ್ರ ಅವರೇ ಹಗರಣದ ಮಾಸ್ಟರ್ ಮೈಂಡ್ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.