Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯಲ್ಲಿ ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ
(ರಾಜ್ಯ ) ಜಿಲ್ಲೆ

ಸಿಂದಗಿಯಲ್ಲಿ ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ ಮಹತ್ವವನ್ನು ಸಾರುವ ಈ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು.
ನಗರದ ಕನ್ನಡಾಂಬೆ ವೃತ್ತದಲ್ಲಿ ಮಂಡ್ಯದಲ್ಲಿ ನಡೆಯುವ ೮೭ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜ್ಯೋತಿ ರಥವನ್ನ ತಾಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಭವ್ಯವಾಗಿ ಬರಮಾಡಿಕೊಂಡು ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಲ್ಲ. ತನ್ನದೇ ಆದ ನೆಲ, ಜಲ, ಸಂಸ್ಕೃತಿಯ ಹಿರಿಮೆಯನ್ನು ಒಳಗೊಂಡಿದೆ. ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ಅಶೋಕ ಅಲ್ಲಾಪುರ, ಶೋಭಾ ಚಿಗರಿ ಮಾತನಾಡಿ, ಡಿ.೨೦ ರಿಂದ ೨೨ರವರೆಗೆ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು ೮೭ ದಿನಗಳ ಕಾಲ ರಾಜ್ಯದ ೨೪೦ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದರು.
ಕನ್ನಡ ರಥವನ್ನು ಪಟ್ಟಣದ ಕನ್ನಡಾಂಬೆಯ ವೃತ್ತದಲ್ಲಿ ಪುಷ್ಪಾರ್ಚನೆ, ಆರತಿ ಮಾಡಿ ಬರಮಾಡಿಕೊಂಡು ಬಸವೇಶ್ವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತದ ಮಾರ್ಗವಾಗಿ ಸಕಲ ಬೀದಿಗಳಲ್ಲಿ ಡೊಳ್ಳು ವಾದ್ಯಗಳೊಂದಿಗೆ ಮೆರವಣಿಗೆ ಮಾಡಿ ಸಂಚರಿಸಿ ಕನಕದಾಸ ವೃತ್ತಕ್ಕೆ ಬಂದು ತಲುಪಿತು. ಅಲ್ಲಿಂದ ಮುಂದಿನ ಯಡ್ರಾಮಿ ತಾಲೂಕಿಗೆ ಮಾಜಿ ಶಾಸಕ ರಮೇಶ ಭೂಸನೂರ ಬೀಳ್ಕೊಟ್ಟರು.

ಕತ್ತಲ್ಲಲ್ಲಿ ಸಾಗಿದ ಕನ್ನಡಮ್ಮನ ರಥ

ದಾರಿ ಉದ್ದಕ್ಕೂ ಕನ್ನಡಮ್ಮನ ರಥವು ಕಗ್ಗತ್ತಲಲ್ಲೇ ಸಾಗಿ ಬಂದಿತು. ಇದರಿಂದ ಸಾರ್ವಜನಿಕರು ಕನ್ನಡಮ್ಮ ಮೆರವಣಿಗೆ ಕತ್ತಲಲ್ಲಿ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದರು. ಹೆಸ್ಕಾಂ ಇಲಾಖೆಗೆ ಸಂಪರ್ಕಿಸಿದರೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು.

ಅಧಿಕಾರಿಗಳು ಗೈರು

ಕನ್ನಡ ನಾಡು, ನುಡಿ, ಜಲ, ಕನ್ನಡದ ಕಂಪನವನ್ನು ಸುಸುವ ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥವು ಸಿಂದಗಿ ನಗರಕ್ಕೆ ಆಗಮಿಸಿದಾಗ ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು, ಸಿಡಿಪಿಒ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ ಇಲಾಖೆ ಹೊರತುಪಡಿಸಿ ಮುಂಚೂಣಿಯಲ್ಲಿರಬೇಕಾದ ತಾಲೂಕಿನ ಬಹುತೇಕ ಅಧಿಕಾರಿಗಳು ಗೈರಾಗಿದ್ದು ಎದ್ದು ಕಾಣುತಿತ್ತು.
ಇದೇ ಸಂದರ್ಭದಲ್ಲಿ ಊರಿನ ಹಿರಿಯಮಠದ ಶಿವಾನಂದ ಶಿವಾಚಾರ್ಯರು ಆಶೀರ್ವಚನ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ್, ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಉಪ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ, ಕಂದಾಯ ನಿರೀಕ್ಷಕ ಆಯ್.ಎ.ಮಕಾಂದಾರ, ನಿಖಿಲ ಖಾನಾಪುರ, ಚಂದ್ರಶೇಖರ ದೇವರೆಡ್ಡಿ, ಎಂ.ಎಂ.ಹಂಗರಗಿ, ಸಂತೋಷ ಪಾಟೀಲ ಡಂಬಳ, ಆನಂದ ಶಾಬಾದಿ, ಪಂಡಿತ ಯಂಪುರೆ, ಸುನಂದಾ ಯಂಪುರೆ, ಸೈನಾಬಿ ಮಸಳಿ, ಜಯಶ್ರೀ ಹದ ನೂರ, ಶರಣಬಸವ ಲಂಗೋಟಿ, ಎ.ಕೆ.ಬಿರಾದಾರ, ಸಿದ್ದು ಬುಳ್ಳಾ, ರಮೇಶ ಯಾಳಗಿ, ಸಂಗನಗೌಡ ಪಾಟೀಲ ಅಗಸಬಾಳ, ಎಂ.ಎಂ.ಚಟ್ಟರಕಿ, ಸಿಡಿಪಿಒ ಶಂಭುಲಿಂಗ ಹಿರೇಮಠ, ಶಿವಾನಂದ ಕಲಬುರಗಿ, ಎಸ್.ಬಿ.ಖಾನಾಪುರ, ಸಂತೋಷ ಮನಗೂಳಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕನ್ನಡದ ಮನಸ್ಸುಗಳು ಈ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.