ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಸಮೀಪದ ಬೇನಾಳ ಆರ್.ಸಿ.ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿಜೇತ ತಂಡಕ್ಕೆ ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಲಾಳಶೀರಿ, ವಿಜಯಪುರ ನಗರ ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಸ್ ಜೆ ಬಿರಾದಾರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಂ. ಪಾಟೀಲ,ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ನಿಡಗುಂದಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರ ಎಸ್.ಎಂ. ಪಾಟಿಲ, ವಿಜಯಪುರ ಜಿಲ್ಲಾ ಕೋಕೋ ಸಂಸ್ಥೆಯ ಗೌರವ ಅಧ್ಯಕ್ಷ ವೀರೇಶ ಗದಗ, ಅಧ್ಯಕ್ಷ ನಾಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ,ಎಸ್.ಎಸ್.ಗೌಡರ, ವೀರೇಶ ಸೇರಿದಂತೆ ಸದಸ್ಯರು ಖೋಖೋ ಪಂದ್ಯಾಟದಲ್ಲಿ ಜಯ ದಾಖಲಿಸಿ ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ಶುಭ ಹಾರೈಸಿದ್ದಾರೆ.

