ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ನಿರ್ಮಲ ಸಿ ಅವರು ಸಲ್ಲಿಸಿದ್ದ “ಪ್ರಿಸರ್ವೇಶನ್ ಆ್ಯಂಡ್ ಕನ್ರ‍್ವೇಶನ್ ಆಫ್ ಮ್ಯಾನುಸ್ಕಿçಪ್ಟ್ ಇನ್ ದಿ ಲೈಬ್ರರೀಸ್ ಆಫ್ ಕರ್ನಾಟಕ: ಎ ಸ್ಟಡಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ನಿರ್ಮಲ ಸಿ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಜಿ.ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ನಿರ್ಮಲ ಸಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.

