ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಕೆ ಚಾಲನೆ ನೀಡಿದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯವರೆಗೆ ನಡೆಯಿತು.
ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
