ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಂದಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆಯ ವ್ಯಾಪ್ತಿಯಲ್ಲಿನ ಖಾಲಿಯಿರುವ ಅಂಗನವಾಡಿ ಕಾಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ೫೨ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೨೯ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿರುತ್ತದೆ. ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
