ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸ್ಥಳೀಯವಾಗಿ ಇಲ್ಲದಿರುವುದರಿಂದ, ಅ.೧೩ ರಂದು ಸಿಂದಗಿ ರಸ್ತೆಯ ಅವರ ನಿವಾಸದಲ್ಲಿ ಹಮ್ಮಿಕೊಂಡ ಬನ್ನಿ ವಿನಿಮಯ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
ಕಾರಣ ರೈತರು, ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು ಸಹಕರಿಸಬೇಕು. ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಹಾಗೂ ಶಿವಯೋಗಿ ಸಿದ್ಧರಾಮೇಶ್ವರರು ತಮಗೂ ತಮ್ಮ ಕುಟುಂಬಕ್ಕೂ ಆರೋಗ್ಯ, ಸುಖ, ಶಾಂತಿ, ಸಮೃದ್ಧಿ, ಅಷ್ಟ ಐಶ್ವರ್ಯ ಭಾಗ್ಯ ದಯಪಾಲಿಸಲೆಂದು ಹಾರೈಸಿದ್ದಾರೆ.
