Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಪತ್ಬಾಂಧವರಾದ ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಪತ್ಬಾಂಧವರಾದ ಸಚಿವ ಎಂ.ಬಿ.ಪಾಟೀಲ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೋರ್ಸಿಗೆ ಅಗತ್ಯವಾಗಿರುವ ಸಂಪೂರ್ಣ ಆರ್ಥಿಕ ನೆರವು ನೀಡಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗ ಕೋರ್ಸಿಗೆ ಅಗತ್ಯವಾಗಿರುವ ಸಂಪೂರ್ಣ ಆರ್ಥಿಕ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.
ಸೋಮವಾರ ವಿಜಯಪುರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ ಮತ್ತು ಯಶವಂತ ಮಾರುತಿ ಮೋಹಿತೆ, ಬಬಲೇಶ್ವರ ತಾಲೂಕಿನ ಕಾರಜೋಳ ತಾಂಡಾದ ಅಜೀತ ಪರಶುರಾಮ ರಾಠೋಡ ಹಾಗೂ ಕಂಬಾಗಿಯ ರಾಜಶ್ರೀ ಮಲ್ಲಿಕಾರ್ಜುನ ಮಠ ಅವರಿಗೆ ಸಚಿವರು ಮೊದಲ ಕಂತಾಗಿ ಎಂ. ಬಿ. ಬಿ. ಎಸ್. ಕೋರ್ಸಿನ ಮೊದಲ ವರ್ಷದ ಬೋಧನೆ ಶುಲ್ಕ, ಹಾಸ್ಟೆಲ್ ಶುಲ್ಕ ಮತ್ತು ಊಟದ ಶುಲ್ಕಕ್ಕೆ ಅಗತ್ಯವಾಗಿರುವ ಹಣದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ ಕುಲಕರ್ಣಿ, ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ) ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಬಾಬಾನಗರದ ವಿದ್ಯಾರ್ಥಿ ವಿಶಾಲ ಕೋರೆಗಾಂವ ನೀಟ್ ಪರೀಕ್ಷೆಯಲ್ಲಿ 72357ನೇ ಪಡೆದಿದ್ದು, ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ. ಈ ವಿದ್ಯಾರ್ಥಿಯ ತಂದೆ ರಾಯಗೊಂಡ ಮತ್ತು ತಾಯಿ ವಿಲಾಸಮತಿ ರೈತರಾಗಿದ್ದು, ಬಡಕುಟುಂಬಕ್ಕೆ ಸೇರಿದ್ದಾರೆ. ಈ ವಿದ್ಯಾರ್ಥಿಯ ಕೋರ್ಸಿನ ಪ್ರಥಮ ವರ್ಷದ ಬೋಧನೆ, ಹಾಸ್ಟೇಲು ಮತ್ತು ಊಟದ ವೆಚ್ಚ ಸೇರಿ ಮೊದಲ ಕಂತಿನ ರೂ. 1 ಲಕ್ಷ 54 ಸಾವಿರದ 600 ಚೆಕ್ ನ್ನು ಸಚಿವರು ವಿತರಿಸಿದರು.
ಇದೇ ವೇಳೆ ಅರಕೇರಿಯ ವಿದ್ಯಾರ್ಥಿ ಕರಣ ಸಿಂಧೆ ನೀಟ್ ಪರೀಕ್ಷೆಯಲ್ಲಿ 75075ನೇ ರ‌್ಯಾಂಕ್ ಪಡೆದಿದ್ದು, ಹಾವೇರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ. ಈ ವಿದ್ಯಾರ್ಥಿಯ ತಂದೆ ಪಂಡಿತ ಮತ್ತು ಬಾನಾಬಾಯಿ ಕೂಲಿ ಕಾರ್ಮಿಕರಾಗಿದ್ದಾರೆ. ಈ ವಿದ್ಯಾರ್ಥಿಯ ಕಾಲೇಜು, ಹಾಸ್ಟೇಲು ಹಾಗೂ ಊಟದ ಶುಲ್ಕ ಸೇರಿ ಒಟ್ಟು ರೂ. 1 ಲಕ್ಷ 91 ಸಾವಿರದ 250 ಚೆಕ್ ನ್ನು ಸಚಿವರು ವಿತರಿಸಿದರು.
ಇದೇ ಗ್ರಾಮದ ಮತ್ತೋರ್ವ ವಿದ್ಯಾರ್ಥಿ ಯಶವಂತ ಮೋಹಿತೆ ನೀಟ್ ಪರೀಕ್ಷೆಯಲ್ಲಿ 92618ನೇ ರ‌್ಯಾಂಕ್ ಪಡೆದಿದ್ದು, ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಆಯ್ಜೆಯಾಗಿದ್ದಾನೆ. ಈತನ ತಂದೆ ಮಾರುತಿ ದರ್ಜಿ(ಟೇಲರ್) ಆಗಿದ್ದು, ತಾಯಿ ವಂದನಾ ಗೃಹಿಣಿಯಾಗಿದ್ದಾರೆ. ಈ ವಿದ್ಯಾರ್ಥಿಯ ಕಾಲೇಜು, ಹಾಸ್ಟೇಲು ಹಾಗೂ ಊಟದ ಶುಲ್ಕ ರೂ. 3 ಲಕ್ಷ 9 ಸಾವಿರದ 321 ಚೆಕ್ ನ್ನು ಸಚಿವರು ವಿತರಿಸಿದರು.
ಬಬಲೇಶ್ವರ ತಾಲೂಕಿನ ಕಾರಜೊಳ ತಾಂಡಾದ ಅಜೀತ ರಾಠೋಡ ನೀಟ್ ಪರೀಕ್ಷೆಯಲ್ಲಿ 139412 ರ‌್ಯಾಂಕ್ ಪಡೆದಿದ್ದು, ಕಾರವಾರ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ. ಈತನ ತಂದೆ ಪರಶುರಾಮ ಮತ್ತು ತಾಯಿ ಪ್ರೇಮಾ ಕೃಷಿ ಕಾರ್ಮಿಕರಾಗಿದ್ದು, ಉದ್ಯೋಗ ಅರಸಿ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿರುತ್ತಾರೆ‌. ಈತನ ಕಾಲೇಜು ಮತ್ತು ಹಾಸ್ಟೇಲ್ ಶುಲ್ಕಕ್ಕೆ ಅಗತ್ಯವಾದ ರೂ. 1 ಲಕ್ಷ 35 ಸಾವಿರ ಹಣದ ಚೆಕ್ ನ್ನು ಸಚಿವರು ವಿತರಿಸಿದರು.
ಬಬಲೇಶ್ವರ ತಾಲೂಕಿನ ಕಂಬಾಗಿ ಗ್ರಾಮದ ವಿದ್ಯಾರ್ಥಿನಿ ರಾಜಶ್ರೀ ಮಠ ನೀಟ್ ಪರೀಕ್ಷೆಯಲ್ಲಿ 56262ನೇ ಪಡೆದಿದ್ದು, ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾಳೆ. ಈಕೆಯ ತಂದೆ ಮಲ್ಲಿಕಾರ್ಜುನ ಮತ್ತು ತಾಯಿ ಜಯಶ್ರೀ ರೈತರಾಗಿದ್ದಾರೆ. ಈ ವಿದ್ಯಾರ್ಥಿನಿಯ ಕಾಲೇಜು, ಹಾಸ್ಟೇಲು ಹಾಗೂ ಊಟದ ಶುಲ್ಕ ರೂ. 1 ಲಕ್ಷ 56 ಸಾವಿರದ 815 ಚೆಕ್ ನ್ನು ಸಚಿವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ ಅವರು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಪೋಷಕರು, ಊರು, ಜಿಲ್ಲೆ ಮತ್ತು ರಾಜ್ಯಕ್ಕೆ ಹೆಸರು ತರುಬೇಕು. ವೈದ್ಯರಾದ ನಂತರ ಉತ್ತಮ ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಈ ಮುಂಚೆಯಿಂದಲೂ ಬಡ ವಿದ್ಯಾರ್ಥಿಗಳು ವೈದ್ಯರಾಗುವ ಕನಸಿಗೆ ನೆರವು ನೀಡುತ್ತ ಬಂದಿರುವ ಸಚಿವ ಎಂ. ಬಿ. ಪಾಟೀಲ ಅವರು ಕಳೆದ ತಿಂಗಳು‌ ಇಬ್ಬರು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಕಾಲೇಜು ಮತ್ತು ಹಾಸ್ಟೇಲಿನ ಶುಲ್ಕವನ್ನು ಭರಿಸಿ ನೆರವಾಗಿದ್ದರು. ಇಂದು ಮತ್ತೆ ಐದು ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚುವ ಮೂಲಕ ನೆರವಾಗಿದ್ದಾರೆ.

ಸಚಿವ ಎಂ.ಬಿ.ಪಾಟೀಲ‌ ನಮ್ಮ ಪಾಲಿಗೆ ದೇವರ ಸ್ವರೂಪ

ವಿದ್ಯಾರ್ಥಿಗಳ ಪೋಷಕರು ಪತ್ರಿಕೆಯೊಂದಿಗೆ ಮಾತನಾಡಿ, ಬಡವರಾದ ಮಕ್ಕಳ ಭವಿಷ್ಯ ಬಗ್ಗೆ ಚಿಂತೆ ಉಂಟಾಗಿತ್ತು. ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ನಮ್ಮ ಮಕ್ಕಳು ಎಂ.ಬಿ.ಬಿ.ಎಸ್. ಸೀಟು ಪಡೆದರೂ ಹಣವಿಲ್ಲದ ಕಾರಣ ಸಂಕಷ್ಟದಲ್ಲಿದ್ದೇವು. ಇಂಥ ಕಠಿಣ ಪರಿಸ್ಥಿತಿಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರು ನಮ್ಮ ಪಾಲಿಗೆ ದೇವರ ರೂಪದಲ್ಲಿ ಬಂದು ಆಪದ್ಬಾಂಧವರಾಗಿದ್ದಾರೆ. ಆರ್ಥಿಕ ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿ ನಮ್ಮ ಮಕ್ಕಳು ವೈದ್ಯರಾಗಬೇಕು ಎಂಬ ಕನಸು ನನಸಾಗಲು‌ ಕಾರಣರಾಗಿದ್ದಾರೆ. ಅವರಿಗೆ ಸದಾ ಋಣಿಯಾಗಿದ್ದೇವೆ. ದೇವರು ಅವರಿಗೆ ಸದಾ ಒಳಿತನ್ನು ಮಾಡಲಿ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.