Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ವಚನ ದರ್ಶನ’ ಕೃತಿ ಮುಟ್ಟುಗೋಲು & ’ಶರಣರ ಶಕ್ತಿ’ ಸಿನಿಮಾ ನಿಷೇಧಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

’ವಚನ ದರ್ಶನ’ ಕೃತಿ ಮುಟ್ಟುಗೋಲು & ’ಶರಣರ ಶಕ್ತಿ’ ಸಿನಿಮಾ ನಿಷೇಧಕ್ಕೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲಿಂಗಾಯತ ಸಮಾಜ ಮತ್ತು ಬಸವ ಭಕ್ತರನ್ನು ದಿಕ್ಕು ತಪ್ಪಿಸುವ ’ವಚನ ದರ್ಶನ’ ಕೃತಿಯ ಮುಟ್ಟುಗೋಲಿಗೆ ಹಾಗೂ ವಿವಾದಿತ ಶರಣರ ಚರಿತ್ರೆಗೆ ಮಸಿ ಬಳೆಯುವ ರೀತಿಯಲ್ಲಿ ನಿರ್ಮಿಸಿದ ’ಶರಣರ ಶಕ್ತಿ’ ಚಲನಚಿತ್ರ ನಿಷೇಧಕ್ಕೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಿಂದಗಿ-ವಿಜಯಪುರದ ಕಲ್ಬುರ್ಗಿ ಫೌಂಡೇಶನ್ ಆಗ್ರಹಿಸಿವೆ.
ಈ ಕುರಿತು ಸೋಮವಾರ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುವ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಅವರು, ಅಯೋಧ್ಯಾ ಪ್ರಕಾಶನದವರು ಸದಾಶಿವ ಸ್ವಾಮಿಗಳ ಪ್ರಧಾನ ಸಂಪಾದಕತ್ವದಲ್ಲಿ ಹೊರ ತಂದ ’ವಚನ ದರ್ಶನ’ ಎಂಬ ಕೃತಿಯಲ್ಲಿ ಕೆಲ ಸಂಪ್ರದಾಯವಾದಿ ಶಕ್ತಿಗಳು ಇಂದು ವಚನ ಸಾಹಿತ್ಯವನ್ನು ತಮ್ಮ ಅನಕೂಲಕ್ಕೆ ತಕ್ಕಂತೆ ಖೋಟಾ ವಚನ ಪ್ರಕ್ಷಿಪ್ತ ವಚನ ಮತ್ತು ಸಂಸ್ಕೃತ ಉಕ್ತಿಗಳನ್ನು ಒಳಗೊಂಡ ಕೆಲ ದೋಷಪೂರಿತ ವಚನಗಳನ್ನು ಉಲ್ಲೇಖಿಸಿ ವಚನ ಚಳುವಳಿಗೆ ಆಗಮ ವೇದ ಶಸ್ತ್ರ ಉಪನಿಷದ ಆದರ್ಶಪ್ರಾಯವಾಗಿದ್ದು ಲಿಂಗಾಯತ ಧರ್ಮ ಮತ್ತು ವಚನ ಸಾಹಿತ್ಯವು ವೇದ ಆಗಮ ಉಪನಿಷದಗಳ ವಿಕಾಸ ಎಂದು ನಿರೂಪಿಸುವ ಹುಸಿ ಪ್ರಯತ್ನವೆಂದು ಕಂಡು ಬರುತ್ತದೆ. ಇಂದು ಬಸವ ತತ್ವವು ಜಗತ್ತಿನ ಪ್ರಗತಿಪರ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವದ ಮಾದರಿ ಎನಿಸಿದ ಶರಣರ ಅನುಭವ ಮಂಟಪ ಪರಿಕಲ್ಪನೆಯನ್ನು ಬುಡುಮೇಲು ಮಾಡುವ ರೀತಿಯಲ್ಲಿ ಕೆಲ ಸಂಪ್ರದಾಯವಾದಿಗಳು ವಚನ ದರ್ಶನ ಕೃತಿ ರಚಿಸಿದ್ದಾರೆ.
ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರದಿಂದ ಬೇರೆ ಬೇರೆ ನಗರಗಳಲ್ಲಿ ವಚನ ದರ್ಶನ ಬಿಡುಗಡೆ ಮಾಡಿ ಪುಸ್ತಕವನ್ನು ಮಾರಾಟ ಮಾಡುತ್ತಿದ್ದಾರೆ. ವಚನ ಚಳುವಳಿಗೆ ವೇದ ಶಾಸ್ತ್ರ ಆಗಮ ಮೂಲ ಎನ್ನುವ ರೀತಿಯಲ್ಲಿ ಬಿಂಬಿಸುವ ವಚನ ದರ್ಶನವು ಬಸವ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯವಾಗಿದೆ. ಸಾರ್ವಕಾಲಿಕ ಸಮಾನತೆ ಶಾಂತಿ ಪ್ರೀತಿ ಸಮ ಬಾಳು ಸಮಪಾಲು ಎನ್ನುವ ಶ್ರೇಷ್ಠ ಧ್ಯೇಯ ಹೊಂದಿದ ಶರಣರ ಅಭಿವ್ಯಕ್ತಿಗೆ ಕಳಂಕ ತರುವ ವಚನ ದರ್ಶನವನ್ನು ಈ ಕೂಡಲೇ ಸರಕಾರ ಮುಟ್ಟುಗೋಲು ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶರಣ ಸಂಸ್ಕೃತಿ ಅವಮಾನಿಸುವ ’ಶರಣರ ಶಕ್ತಿ’ ಚಲನಚಿತ್ರ

ಇನ್ನು ಶ್ರೀಮತಿ ಅನುರಾಧಾ ಕುಲಕರ್ಣಿ ನಿರ್ಮಾಣದ ಮತ್ತು ದೀಲಿಪ ಶರ್ಮ ಸಾಹಿತ್ಯ, ಸಂಭಾಷಣೆ, ನಿರ್ದೇಶನದ ’ಶರಣರ ಶಕ್ತಿ’ ಎಂಬ ಚಲನಚಿತ್ರವು, ಅತ್ಯಂತ ಅನಾಗರಿಕ ಸಂಭಾಷಣೆರನ್ನೊಳಗೊಂಡಿದ್ದು, ಅಕ್ಕನಾಗಮ್ಮನವರನ್ನು ಪುಂಡ ಜಂಗಮರ ಜಾರಿಣಿತನಕ್ಕೆ ಚೆನ್ನ ಬಸವಣ್ಣನವರ ಜನ್ಮಕ್ಕೆ ಕಾರಣ ಎಂಬ ಮಹಾ ಪ್ರಮಾದವನ್ನು ಚಿತ್ರಿಸಿದ್ದಾರೆ. ಶರಣರ ಬದುಕನ್ನು ಕ್ರೌರ್ಯದಿಂದ ಅಸಂಬದ್ಧ ಮಾತುಗಳಿಂದ ಚಲನ ಚಿತ್ರವನ್ನು ನಿರ್ಮಿಸಿದ್ದು ಕನ್ನಡದ ಹೆಮ್ಮೆಯ ಶರಣ ಸಂಸ್ಕೃತಿಗೆ
ಅಪಮಾನ ಮಾಡಿದ್ದಾರೆ. ಇಂತಹ ಚಲನ ಚಿತ್ರದ ಅನೇಕ ಸನ್ನಿವೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಶೀಘ್ರದಲ್ಲೇ ಚಲನ ಚಿತ್ರ ಬಿಡುಗಡೆಗೊಳ್ಳಲಿದೆ. ಬಸವ ಭಕ್ತರ ಭಾವನೆಗೆ ದಕ್ಕೆ ತರುವ ರೀತಿಯಲ್ಲಿ ಚಿತ್ರಿಸಿದ ಈ ಚಲನಚಿತ್ರದಿಂದ ಸಮಾಜದಲ್ಲಿ ಶಾಂತಿ ಕದಡುವ ಅಪಾಯವಿದ್ದು, ಕಾರಣ ’ಶರಣರ ಶಕ್ತಿ’ ಪ್ರದರ್ಶನದ ಮೇಲೆ ಸರಕಾರ ನಿಷೇಧ ಹೇರಿ ಮುಂದಾಗುವ ಅನಾಹುತಗಳನ್ನು ನಿಯಂತ್ರಿಸಬೇಕೆಂದು ಡಾ.ಪಟ್ಟಣ ಮತ್ತು ಕಲಬುರ್ಗಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

“ವಿವಾದಿತ ’ವಚನ ದರ್ಶನ’ ಮುಟ್ಟುಗೋಲು ಮತ್ತು ಶರಣ ಸಂಸ್ಕೃತಿಯನ್ನು ಅವಮಾನಿಸುವ ’ಶರಣರ ಶಕ್ತಿ’ ಚಲನಚಿತ್ರ ನಿಷೇಧಕ್ಕೆ ಆಗ್ರಹಿಸುವ ನಿಟ್ಟಿನಲ್ಲಿ ಅ.16 ಅಕ್ಟೋಬರ್ 2024 ರಂದು ವಿಜಯಪುರ ದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವಿಜಯಪುರ ಜಿಲ್ಲೆಯ ಬಸವ ಭಕ್ತರು ಅಂದು ಬೆಳಿಗ್ಗೆ 11 ಘಂಟೆಗೆ ಉಪಸ್ಥಿತರಿರಬೇಕೆಂದು ಕೋರುವೆ.”
– ಡಾ ಶಶಿಕಾಂತ ಪಟ್ಟಣ
ಅಧ್ಯಕ್ಷರು, ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.