ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ(ಅಧಿಕಾರಿಗಳನ್ನು ಹೊರತು ಪಡಿಸಿ) ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಲಯ, ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯಿಂದ ಪಡೆದುಕೊಂಡು ದಿನಾಂಕ ೩೧-೧೦-೨೦೨೪ರೊಳಗಾಗಿ ತ್ರಿಪ್ರತಿಯಲ್ಲಿ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
