ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪಶುಪಾಲನ ಮತ್ತು ಪಶುವೈದ್ಯ ಇಲಾಖೆಯ ವತಿಯಿಂದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಜಯಪುರ ತಾಲೂಕಿನಲ್ಲಿ ದಿನಾಂಕ ೨೧-೧೦-೨೦೨೪ ರಿಂದ ೨೦-೧೧-೨೦೨೪ರ ವರೆಗೆ ೬ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿಜಯಪುರ ತಾಲೂಕಿನ ರೈತರು ಲಸಿಕಾ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಬಿ.ಎಸ್. ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
