ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ವಿಜಯಪುರ ಕಕರಸಾ ನಿಗಮದಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಶಕ್ತಿ ಯೋಜನೆಯಡಿಯಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಕುರಿತು ಚಾಲಕ, ನಿರ್ವಾಹಕರಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಾರಿಗೆ ಅಧಿಕಾರಿ ಡಿ.ಎ.ಬಿರಾದಾರ, ಸಹಾಯಕ ಸಂಚಾರ ವ್ಯವಸ್ಥಾಪಕರಾದ ಜೆ.ಕೆ.ಹುಗ್ಗೆಣ್ಣವರ, ಕೇಂದ್ರ ಬಸ್ ನಿಲ್ದಾಣ ವಿಜಯಪುರ ವಿಭಾಗದ ಸಿಬ್ಬಂದಿ ವರ್ಗದವರು ಹಾಗೂ ನವಸ್ಪೂರ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

