ವಿಜಯಪುರ: ನಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 33 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 186 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿವಿಧ ಕಾರಣಗಳಿಂದ ನಗರದ ವಿವಿಧೆಡೆ ಖಾಲಿ ಆಗಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನವಾಗಿದೆ. ಕಾರಣ ನ.9 ರೊಳಗಾಗಿ http:\karnemakaone.kar.nic.in\abcd\ ಈ ವೆಬ್ ಸೈಟ್ ದಲ್ಲಿ ಆನ್ ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಸಿ, ಉದ್ಯೋಗ ಪಡೆದುಕೊಳ್ಳಬೇಕು. ಈ ವಿಷಯವನ್ನು ತಮ್ಮ ಸಂಬಂಧಿಕರು, ನೆರೆ-ಹೊರೆ ಯವರಿಗೆ ತಿಳಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
33 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 186 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Related Posts
Add A Comment

