ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣಕ್ಕೆ ಆಗಮಿಸಿದ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಿಜೆಪಿ ಕಾರ್ಯಕರ್ತರು ಹಾಗೂ ರಾವುತರಾಯ , ಮಲ್ಲಯ್ಯ ಜಾತ್ರಾ ಕಮೀಟಿ ಸದಸ್ಯರು ಸನ್ಮಾನಿಸಿ ಬೀಳ್ಕೊಟ್ಟರು.
ಪಟ್ಟಣದ ಮೂಲಕ ವಿಜಯಪುರಕ್ಕೆ ಪ್ರಯಾಣ ಬೆಳೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಮಂಗಳವಾರ ಬಿಜೆಪಿ ಕಾರ್ಯಕರ್ತರು ಮಲ್ಲಯ್ಯ ದೇವಸ್ಥಾನದ ಮುಂದೆ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿ.ಟಿ.ರವಿ ಮಲ್ಲಯ್ಯ ದೇವಸ್ಥಾನಕ್ಕೆ ತೆರಳಿ ರಾವುತರಾಯ, ಮಲ್ಲಯ್ಯನ ದರ್ಶನ ಪಡೆದರು. ನಂತರ ಜಾತ್ರಾ ಕಮೀಟಿಯಿಂದ ಸನ್ಮಾನ ಸ್ವೀಕರಿಸಿದರು.
ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸಹ ವಿಜಯಪುರಕ್ಕೆ ತೆರಳುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಯುವಜನತೆ ಇವರನ್ನು ಮಲ್ಲಯ್ಯ ದೇವಸ್ಥಾನದ ಮುಂದೆ ಸ್ವಾಗತಿಸಿ ಸನ್ಮಾನಿಸಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಸವಶರಣ ಸಂಗಮ ಸೇವಾ ಸಮಿತಿ ಅಧ್ಯಕ್ಷ ಸಂಗಪ್ಪಣ್ಣ ತಡವಲ್, ಜಾತ್ರಾ ಸಮಿತಿ ಅಧ್ಯಕ್ಷ ವಿನೋದ ಪಾಟೀಲ, ಉಪಾಧ್ಯಕ್ಷ ಶ್ರೀಧರ ನಾಡಗೌಡ, ಮಡಿವಾಳಪ್ಪಗೌಡ ಪಾಟೀಲ, ಸೋಮು ದೇವೂರ, ರಮೇಶ ಈಳಗೇರ, ಶಿವರಾಜ್ ತಳವಾರ, ಕಲ್ಮೇಶ ಬುದ್ನಿ, ಚಂದ್ರಶೇಖರ ದಾನಗೊಂಡ, ಮಹಾಂತೇಶ ಬಿರಾದಾರ ಇದ್ದರು.

