Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯ ಶ್ರೀ ಬಸವೇಶ್ವರ ಪ್ರೌಡಶಾಲೆಯಲ್ಲಿ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ೨೦೧೪-೧೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿಧ್ಯಾರ್ಥಿ ಗೆಳೆಯರ ಬಳಗದಿಂದ ಸ್ನೇಹ ಸಮ್ಮಿಲನ ಮತ್ತು ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೌಢಶಾಲೆಯ ಮುಖ್ಯಗುರು ಜೆ.ಬಿ.ಗುಮಶೆಟ್ಟಿ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಗುರು ಹಿರಿಯರಿಗೆ ವಿಧೇಯರಾಗಿ ಜಗತ್ತಿಗೆ ಸಂಸ್ಕಾರ ಕಲಿಸಿಕೊಟ್ಟ ನಮ್ಮ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ಬೆಳೆದು ನಿಲ್ಲುವ ಸ್ವಾವಲಂಬಿ ಪ್ರಜೆಗಳಾಗಿ ಬೆಳೆಯಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳೆಲ್ಲ ಒಟ್ಟಾಗಿ ಸೇರಿ ಗುರುಗಳಿಗೆ ವಂದಿಸುವ ಗೌರವಿಸುವ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.
ಪ್ರಾಥನಾಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಶಿಕ್ಷಕರಾದ ಎಸ್.ಆರ್.ಹರಿಜನ ಮತ್ತು ರಾಕೇಶ ಅವರ ಸುಂದರ ಹಾಡುಗಳಿಂದ ಎಲ್ಲರನ್ನು ಮನರಂಜಿಸಿದರು.
ಶಿಕ್ಷಕರಾದ ಎಸ್.ಪಿ.ರಾಣಗಟ್ಟಿ ಅವರು ಶಿಕ್ಷಕ ಎಂಬ ಪದದ ಅರ್ಥವನ್ನು ತಿಳಿಸಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮದ್ಯ ಇರುವ ಸಂಬಂಧವನ್ನು ಉದಾಹರಣೆ ಸಹಿತ ವಿವರಿಸಿ ವಿಶೇಷ ಉಪನ್ಯಾಸ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ವಿಧ್ಯಾರ್ಥಿಗಳಾದ ಬಸವರಾಜ ಶ್ರೀಗಿರಿ, ಬಸವರಾಜ ಗುಮಶೆಟ್ಟಿ (ಬೆಂಕಿ ಬಸು), ರೂಪಾ ಗದ್ದಗಿಮಠ, ಭಾಗ್ಯಶ್ರೀ ಅಡಕಿ, ನೀಲಮ್ಮ ಭೈರಿ, ರೇಖಾ ಬಡಿಗೇರ, ಕಯ್ಯುಮ ಪೀರಾಪೂರ, ಪರಶುರಾಮ ತಳ್ಳೊಳ್ಳಿ, ವಿಶ್ವ ಮೋಪಗಾರ, ಸಚಿನ ಸಜ್ಜನ, ಬೀಮಾಶಂಕರ ಹೂಗಾರ, ಸಮೀರ ಬಿಸನಾಳ, ವಿರೇಶ ಚಿಕ್ಕಮಠ ಅವರು ತಮ್ಮ ಅನಿಸಿಕೆಗಳನ್ನು ಹೇಳುವ ಮೂಲಕ ಗುರುವೃಂದ ತಮ್ಮ ಮೇಲೆ ಬೀರಿರುವ ಪ್ರಭಾವ ಪ್ರೇರಣೆಗಳನ್ನು ಮೆಲುಕು ಹಾಕುತ್ತಾ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪು ಮಾಡಿಕೊಟ್ಟರು.
ಎನ್.ಕೆ.ಗುಂಡಕನಾಳ ಗುರುಗಳು ಅನುಭವದ ಬುತ್ತಿಯನ್ನು ವಿದ್ಯಾರ್ಥಿಗಳ ಜೊತೆಗೆ ಹಂಚಿಕೊಳ್ಳುತ್ತಾ ಗುರುಗಳು ನಿಮ್ಮಿಂದ ಹಣ, ಆಸ್ತಿ, ಅಂತಸ್ತು, ಯಾವುದನ್ನೂ ಬಯಸುವದಿಲ್ಲಾ ಬದಲಾಗಿ ನಿಮ್ಮ ಏಳಿಗೆ ಮತ್ತು ಪ್ರೀತಿ, ವಿಶ್ವಾಸವನ್ನು ಮಾತ್ರ ಬಯಸುತ್ತಾರೆ ಎಂದು ಹೇಳಿದರು.
ನಂತರ ಶಿಕ್ಷಕರಾದ ವಿ.ಎಮ್.ಸಿಂದಗಿ, ಎಸ್.ಎಸ್.ಬಿರಾದಾರ, ಕೆ.ಎಸ್.ದೇಸಾಯಿ, ರಾಜು ಕಡಕೋಳ, ಬಸವರಾಜ ಹಡಪದ ಅವರು ಹಳೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸಂಗೀತಾ ವಾಲಿ ಮತ್ತು ಪೂರ್ಣಿಮಾ ಹಿರೇಮಠ ನಿರೂಪಿಸಿದರು. ಪ್ರತಿಭಾ ಚಿಕ್ಕಮಠ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪ್ರೀತಿಯ ಭೋಜನದ ವ್ಯವಸ್ಥೆ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.