ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಲ್ಲ ತರಹದ ಸಂಧಿ ನೋವುಗಳಾದ ಮೋಣಕಾಲು ನೊವು, ಸೋಂಟ ನೊವು ಕುತ್ತಿಗೆ ನೊವು, ಭುಜ ನೋವು, ಹಿಮ್ಮಡಿ ನೋವು ಮತ್ತು ಇನ್ನಿತರಹದ ಧೀರ್ಘಕಾಲಿನ ವಾತ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಅಯುರ್ವೆದ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 21 ರಿಂದ 23ರ ವರೆಗೆ ನಡೆಯಲಿದೆ.
ಆಸ್ಪತ್ರೆಯ ಕಾಯಚಿಕಿತ್ಸಾ ವಿಭಾಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಈ ಉಚಿತ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413, 7483278348 ನ್ನು ಸಂಪರ್ಕಿಸಬಹುದಾಗಿದೆ.
