ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹರ್ಷಿ ವಾಲ್ಮಿಕಿ ಜಯಂತಿಯನ್ನು ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಆಚರಿಸಲಾಯಿತು.
ಗುರುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ. ವೈ.ಎಂ.ಜಯರಾಜ ವಾಲ್ಮಿಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ .ಎಂ. ಹೊನ್ನುಟಗಿ ವೈದ್ಯರಾದ ಡಾ.ಆನಂದ ಅಂಬಲಿ, ಡಾ. ಎಸ್. ಎಸ್. ದೇವರಮನಿ ಡಾ.ತೇಜಸ್ವಿನಿ ವಲ್ಲಭ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ, ವಿವಿಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಪಾಲ್ಗೊಂಡು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

