ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪ್ರೌಡಶಾಲೆ, ಬಸವೇಶ್ವರ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪದವಿ ಮಹಾವಿಧ್ಯಾಲಯದ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಲೇಜಿನ ಸಂಭಾಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವವನ್ನು ಆಚರಣೆಮಾಡಲಾಯಿತು.
ಮುಖ್ಯಗುರು ಜಗದೀಶ ಗುಮಶೆಟ್ಟಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು,ಪದವಿ ಕಾಲೇಜಿನ ಪ್ರಾಚಾರ್ಯ ಜಗದೀಶ ಕಾದಳ್ಳಿ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಿದರು.
ಈ ಸಂದರ್ಬದಲ್ಲಿ ನಿಂಗನಗೌಡ ಗುಂಡಕನಾಳ,ರವಿ ಕುಲಕರ್ಣಿ,ವಿರೇಶ ಝಳಕಿ ಸೇರಿದಂತೆ ಅನೇಕರು ಇದ್ದರು.

