ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಅ.೧೯ರಂದು ಶನಿವಾರ ಹೊನವಾಡ ಮತ್ತು ತಿಕೋಟಾ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಬೆ.೮ಗಂಟೆಗೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ.೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಬಳಿಕ ಬೆ.೯ ಗಂಟೆಗೆ ತಿಕೋಟಾ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ತಲಾ ರೂ.೫೦ ಲಕ್ಷ ವೆಚ್ಚದಲ್ಲಿ ಪಟ್ಟಣದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಮತ್ತು ಗೈರಾಣ ಕಾಲನಿಯ ಅಲ್ಪಸಂಖ್ಯಾತರ ಪ್ರದೇಶದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಅಲ್ಲದೇ, ಪಟ್ಟಣ ಪಂಚಾಯಿತಿ ವತಿಯಿಂದ ರೂ.೧೧೨.೨೩ ಲಕ್ಷ ವೆಚ್ಚದಲ್ಲಿ ಪ.ಪಂ ವ್ಯಾಪ್ತಿಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕರ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ನೀಡಲಾಗಿದೆ.

