ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿಎಲ್ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಎಂ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಮಹಾವಿದ್ಯಾಲಯದ ಐಕ್ಯೂ ಎಸಿ ಸಹಭಾಗಿತ್ವದಲ್ಲಿ ಯೂತ್ ಕ್ರಾಸ್ ವಿಭಾಗ ಮತ್ತು ಎನ್ಎಸ್ಎಸ್ ಘಟಕ ಒಂದು ಮತ್ತು ಎರಡು ಎಂ ಬಿ ಪಾಟೀಲ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೇ ರಿಬ್ಬನ್ ಕತ್ತರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ, ಸಾಮಾನ್ಯ ತಪಾಸಣೆ ಮಾಡಿದರು. ವಿದ್ಯಾರ್ಥಿಗಳ ಅಗತ್ಯ ಔಷಧಿ ಬರೆದು ಕೊಟ್ಟರು. ಕೆಲವ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷೆ ಮತ್ತು ಚಿಕಿತ್ಸೆಯ ಅಗತ್ಯವಿರುವವರಿಗೆ ಬಿ ಎಲ್ ಡಿ ಇ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚಿಸಿದರು.
ಶಿಬಿರದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಎನ್ಎಸ್ಎಸ್ ಮುಖ್ಯಸ್ಥ ತರುಣಮ ಜಬೀನ್ ಖಾನ್, ಮಿಲನ್ ರಾಟೋಡ್, ಹಾಗೂ ಯೂತ್ ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಅನಿಲ್ ಪಾಟೀಲ್, ಮತ್ತು ಐಕ್ಯುಎಸ್ಸಿ ನಿರ್ದೇಶಕರು ಪಿ ಎಸ್ ಪಾಟೀಲ್ ಶಿಬಿರವನ್ನು ನಡೆಸಿಕೊಟ್ಟರು.
ಶಿಬಿರದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಸಂಸ್ಥೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

