ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ತಾಲೂಕು ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪವಿಭಾಗದ ವತಿಯಿಂದ ಅಕ್ಟೋಬರ್ ೧೯ರಂದು ಮಧ್ಯಾಹ್ನ ೪ ಗಂಟೆಗೆ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ. ಹೆಸ್ಕಾಂ ಗ್ರಾಮೀಣ ಉಪ ವಿಭಾಗಕ್ಕೆ ಒಳಪಡುವ ಗ್ರಾಮಗಳ ಗ್ರಾಹಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.
