ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ ೩ ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಮನೋಶಾಸ್ತç ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ.೩೦೦೦/- ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಭೇತಿ ನೀಡಲಾಗುತ್ತದೆ.
ಅರ್ಜಿ ನಮೂನೆಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪಡೆದುಕೊಂದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ ೨೯-೧೦-೨೦೨೪ರ ಸಂಜೆ ೫.೩೦ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ೪/೩, ಬಿ.ಎಮ್. ಪಾಟೀಲ್ ಶಾಲೆ ಹತ್ತಿರ, ವಿವೇಕ ನಗರ ವಿಜಯಪುರ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೨೯೫೨೬೧ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.
