ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ವಿಜಯಪುರದ ಸ್ನಾತಕ, ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ಮಂಡ್ಯ, ಸಿಂಧನೂರು, ಬೀದರ ಹಾಗೂ ಉಡುತಡಿ ಸ್ನಾತಕೋತ್ತರ ಕೇಂದ್ರಗಳಿಗೆ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನವನ್ನು ಇದೇ ದಿ. ೨೪ ಮತ್ತು ೨೫ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಇಲ್ಲಿಯ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

