Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಬಲೇಶ್ವರ ಕ್ಷೇತ್ರದಲ್ಲಿ ಕೈಗಾರಿಕೆ ಉತ್ತೇಜನಕ್ಕೆ ಒತ್ತು :ಎಂಎಲ್ಸಿ ಸುನೀಲಗೌಡ
(ರಾಜ್ಯ ) ಜಿಲ್ಲೆ

ಬಬಲೇಶ್ವರ ಕ್ಷೇತ್ರದಲ್ಲಿ ಕೈಗಾರಿಕೆ ಉತ್ತೇಜನಕ್ಕೆ ಒತ್ತು :ಎಂಎಲ್ಸಿ ಸುನೀಲಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಭೂತ ಸೌಕರ್ಯ, ಶಿಕ್ಷಣ, ಗುಣಮಟ್ಟದ ವಿದ್ಯುತ್ ಪೂರೈಕೆ, ಕೈಗಾರಿಕೆಗೆ ಉತ್ತೇಜನಕ್ಕೆ ಒತ್ತು ನೀಡಲಾಗಿದೆ ಎಂದು ವಿಧಾನಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶನಿವಾರ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ನಂತರ ತಿಕೋಟಾ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿ ನಡೆದ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ತಲಾ ರೂ. 50 ಲಕ್ಷ ವೆಚ್ಚದಲ್ಲಿ ಪಟ್ಟಣದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಮತ್ತು ಗೈರಾಣ ಕಾಲನಿಯ ಅಲ್ಪಸಂಖ್ಯಾತರ ಪ್ರದೇಶದಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಪ. ಪಂ. ವತಿಯಿಂದ ರೂ 112.23 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ತಿಕೋಟಾದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ವಾರ್ಡವಾರು ಬೇಡಿಕೆಗಳನ್ನು ಕ್ರೂಢಿಕರಿಸಿ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ವರದಿ ನೀಡಬೇಕು ಎಂದು ಪ.ಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿಯ ಮಾದರಿಯಲ್ಲಿ ಶಿಕ್ಷಣ, ಕೈಗಾರಿಕೆ, ವಿದ್ಯುತ್ ಹಾಗೂ ಮೂಲಭೂತ ಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಬಬಲೇಶ್ವರ ಮತಕ್ಷೇತ್ರದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ನಾನಾ ಕೈಗಾರಿಕೋದ್ಯಮಿಗಳಿಂದ ಸಿ.ಎಸ್.ಆರ್ ಅನುದಾನದಲ್ಲಿ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಕಾನ್ವೆಂಟ್ ಮಾದರಿಯಲ್ಲಿ ಶಿಕ್ಷಣ ಒದಗಿಸುತ್ತಿದ್ದಾರೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಈ ಎರಡೂ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಯಿತು.
ಹೊನವಾಡ ಕಾರ್ಯಕ್ರಮದಲ್ಲಿ ಮುಖಂಡರಾದ ರಾಮಗೊಂಡ ಚಾವರ, ಸಿದ್ದು ಬೆಳಗಾವಿ, ವಿಜಯಕುಮಾರ ಹಿರೇಮಠ, ಅಕ್ಬರ ತಿಕೋಟಿ, ಸಾಬು ಖಂಡೇಕಾರ, ದುಂಡಪ್ಪ ವಾಲಿಕಾರ, ಶ್ರೀಕಾಂತ ಕುಂಬಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಪಿಡಿಓ ಶೋಭಾ ಸಿಳೀನ, ತಿಕೋಟಾ ಪಟ್ಟಣದ ಕಾರ್ಯಕ್ರಮದಲ್ಲಿ ಮುಖಂಡರಾದ ವಿಜುಗೌಡ ಪಾಟೀಲ, ಆರ್. ಬಿ. ದೇಸಾಯಿ, ಭೀಮು ಹಂಗರಗಿ, ಸಂತೋಷ ಕೋಲಾರ, ಮಲ್ಲಿಕಾರ್ಜುನ ಹಂಜಗಿ, ಬಸಯ್ಯಾ ವಿಭೂತಿಮಠ, ಭಾಗೀರಥಿ ತೇಲಿ, ಮಮ್ಮು ಮುಜಾವರ, ಲೇಪು ಕೊಣ್ಣೂರ, ಹಾಜಿಬಾ ಕೋಟ್ಟಲಗಿ, ರಾಜಕುಮಾರ ಸುಣಗಾರ, ಪಂ. ಪಂ. ಅಧಿಕಾರಿ ರಾಘವೇಂದ್ರ ನಡುವಿನಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.