Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿರಾ ನಗರದಲ್ಲಿ ಶೆಡ್‌ಗಳ ತೆರವು ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಇಂದಿರಾ ನಗರದಲ್ಲಿ ಶೆಡ್‌ಗಳ ತೆರವು ಕಾರ್ಯಾಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದ ಶಿರೋಳ ರಸ್ತೆಯಲ್ಲಿರುವ ಕೊಳಚೆ ಮಂಡಳಿಯವರು ನೀಡಿದ್ದರು ಎನ್ನಲಾದ ಜಾಗೆಯಲ್ಲಿನ ಶಡ್‌ಗಳನ್ನು ಪುರಸಭೆಯವರು ಶುಕ್ರವಾರ ತೆರವುಗೊಳಿಸಿದರು.
ಕಳೆದ ಕೆಲವು ದಿನಗಳ ಹಿಂದೆ ಇಲ್ಲಿರುವ ಶಡ್‌ಗಳನ್ನು ತೆರವುಗೊಳಿಸುವದಾಗಿ ಪುರಸಭೆಯವರು ತಿಳಿಸಿದ್ದರು. ಈ ಬಗ್ಗೆ ಕೆಲವರು ಕೊಳಚೆ ಮಂಡಳಿಯವರು ಮತ್ತು ಪುರಸಭೆಯವರು ಜಂಟಿಯಾಗಿ ಸರ್ವೇ ಮಾಡಿ ಈ ಜಾಗೆಯನ್ನು ನಮಗೆ ನೀಡಿದ್ದಾರೆ. ನಮಗೆ ಈ ಜಾಗೆಯಿಲ್ಲದೇ ವಾಸ್ತವಕ್ಕೆ ಬೇರೆ ಜಾಗೆಗಳಿಲ್ಲ. ದಯವಿಟ್ಟು ನಮ್ಮ ಮನೆಗಳನ್ನು ತೆವುಗೊಳಿಸಬೇಡಿ ಎಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಇದಾದ ಬಳಿಕ ಪುರಸಭೆ ಸಾಮಾನ್ಯ ಸಭೆಯಲ್ಲಿ ಕೊಳಚೆ ಮಂಡಳಿ ನೀಡಿದ ಜಾಗೆ ಬೇರೆ ಈ ಷಡ್ ನಿರ್ಮಿಸಿದ ಜಾಗೆ ಬೇರೆ. ಇಲ್ಲಿ ಜಾಗೆ ಕೊಡಿಸುವದಾಗಿ ಸುಳ್ಳು ಹೇಳಿ ಬಡವರ ಬಳಿ ಮತ್ತು ನಮ್ಮೂರಿನವರಲ್ಲದವರ ಬಳಿ ಕೆಲವರು ದುಡ್ಡು ಪಡೆದು ಮೋಸ ಮಾಡಿದ್ದಾರೆ ಎಂದು ಪುರಸಭೆ ಸದಸ್ಯ ಹಣಮಂತ ಭೋವಿ ಆರೋಪಿಸಿದ್ದರು. ಸಭೆಯಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆಯಾಗಿ ಮತ್ತೊಮ್ಮೆ ಸರ್ವೇ ಮಾಡಿ ಅನಧಿಕೃತವಾಗಿದ್ದರೆ ಶಡ್‌ಗಳನ್ನು ತೆರವುಗೊಳಿಸಬೇಕೆಂದು ಶಾಸಕ ಸಿ.ಎಸ್.ನಾಡಗೌಡರು ಆದೇಶಿಸಿದ್ದರು. ಈ ಬಗ್ಗೆ ತಿಳಿದ ಕೊಳಚೆ ಮಂಡಳಿಯ ಹಕ್ಕುಪತ್ರ ಹೊಂದಿದ್ದ ಕೆಲ ಫಲಾನುಭವಿಗಳು ಕಲ್ಬುರ್ಗಿಯ ಉಚ್ಛನ್ಯಾಯಾಲಯದ ಮೊರೆ ಹೋಗಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಇಂದು ಜೆಸಿಬಿಯಿಂದ ಎಲ್ಲ ಶಡ್‌ಗಳನ್ನು ತೆರವುಗೊಳಿಸಲಾಗಿದೆ.
ಈ ವೇಳೆ ಮಾಧ್ಯಮದವರೊಂದಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ ಹಲವು ವರ್ಷಗಳ ಹಿಂದೆ ಈ ಜಾಗೆಯನ್ನು ಮದರಿ ಎನ್ನುವವರಿಗೆ ಲೀಸ್ ನೀಡಲಾಗಿತ್ತು. ಅವರ ಅವಧಿಯ ಬಳಿಕ ತಮ್ಮ ಬೆಲೆ ಬಾಳುವ ಸಾಮಾನುಗಳನ್ನು ತೆಗೆದುಕೊಳ್ಳಲು ಕಾಲಾವಕಾಶ ಕೋರಿ ಕೋರ್ಟ ನ ಮೊರೆ ಹೋಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ತಮ್ಮ ವಯಕ್ತಿಕ ಕಾರಣದಿಂದ ಅವರು ಜೈಲಿನಲ್ಲಿದ್ದು ಅವರ ಮಶಿನರಿ ಸಾಮಾನುಗಳನ್ನು ದೂರ ಸರಿಸಿ ಈ ಜಾಗೆಯಲ್ಲಿ ಶಡ್ ಹೊಡೆದುಕೊಂಡು ಇಪ್ಪತ್ತು ವರ್ಷದಿಂದ ನಾವು ಇದೇ ಶಡ್ ನಲ್ಲಿದ್ದೇವೆ ನಮ್ಮನ್ನು ತೆರವುಗೊಳಿಸಬೇಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ನಾವು ೬ ಜನರ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರ ತಂಡ ರಚಿಸಿ ಜಾಗೆಯಲ್ಲಿ ಬಂದು ಪರಿಶೀಲಿಸಿ ನೋಡಲಾಗಿ ಯಾರೊಬ್ಬರೂ ಇಲ್ಲಿ ವಾಸವಿಲ್ಲದ್ದು ಕಂಡು ಬಂದಿದೆ. ಕೊಳಚೆ ಮಂಡಳಿ ನೀಡಿದ ಹಕ್ಕು ಪತ್ರದಲ್ಲಿನ ಫೊಟೋಗೂ ಜಾಗೆಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ನಾವೇ ಸ್ವತಃ ನಿಂತು ಈ ಶಡ್‌ಗಳನ್ನು ತೆರವುಗೊಳಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.