ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನೊಳಗೊಂಡಂತೆ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೪ರಂದು ಸಂಜೆ ೫ ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
