ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.
