ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೦-೨೦೨೪ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
