Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಬೈರತಿ ಸುರೇಶರಿಂದ ಮುಡಾ ಕಡತಗಳ ಭಸ್ಮ :ಶೋಭಾ
(ರಾಜ್ಯ ) ಜಿಲ್ಲೆ

ಸಚಿವ ಬೈರತಿ ಸುರೇಶರಿಂದ ಮುಡಾ ಕಡತಗಳ ಭಸ್ಮ :ಶೋಭಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಸಿದ್ದರಾಮಯ್ಯ ರಕ್ಷಿಸಲು ಹುನ್ನಾರ | ಸಿಎಂ ರಾಜೀನಾಮೆಗೆ ಆಗ್ರಹ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸುವ ಸಲುವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿದ್ದರು. 1997ರ ನಂತರದ ಎಲ್ಲಾ ಕಡತಗಳನ್ನು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದರು. ಆ ಕಡತಗಳು ಎಲ್ಲಿ ಹೋದವು? ನಿಮ್ಮ ರಕ್ಷಣೆಗಾಗಿ ಮುಡಾದ ಎಲ್ಲಾ ಕಡತಗಳು ಸಚಿವ ಸುರೇಶ್ ಒಯ್ದು ಸುಟ್ಟು ಹಾಕಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಷ್ಟೇ ಅಲ್ಲದೆ ಬೈರತಿ ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕೇವಲ ಸಿದ್ದರಾಮಯ್ಯನವರ ಬಾಮೈದ ಹಾಗೂ ಜಮೀನು ಮಾಲೀಕ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ವಿರುದ್ಧ ತನಿಖೆ ನಡೆಸುವುದಷ್ಟೇ ಅಲ್ಲ, ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ತನಿಖಾ ಸಂಸ್ಥೆಗಳು ತನಿಖೆ ನಡೆಸಬೇಕು ಎಂದು ಸಚಿವೆ ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ, ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಡಲು ಕಾನೂನನ್ನು ಬದಲಿಸಿದ್ದಾರೆ ಎಂದು ಹೇಳಿದೆ. ಮೊದಲನೆಯದಾಗಿ ನೀವು ತೆಗೆದುಕೊಂಡಿರುವ ಜಮೀನು ಅಕ್ರಮವಾಗಿದೆ. ಮೂಲತಃ ಈ ಜಮೀನು ಪರಿಶಿಷ್ಟ ಜಾತಿಯ ವ್ಯಕ್ತಿಗೆ ಸೇರಿದ್ದು, ಜಮೀನು ಮಾಲೀಕ ಎಂದು ಹೇಳಿಕೊಂಡಿದ್ದ ದೇವರಾಜು ಎಂಬುವರಿಗೆ ಸೇರಿದ್ದಲ್ಲ. ನಿಮಗೆ ಜಮೀನು ಹೇಗೆ ಸಿಕ್ಕಿತು? ನಿಮ್ಮ ಬಾಮೈದಗೆ ಈ ಭೂಮಿ ನಿಮಗೆ ಹೇಗೆ ಕೊಟ್ಟರು? ಎಂದು ಪ್ರಶ್ನಿಸಿದರು.
ಹಗರಣ ನಡೆದಾಗ ಸಿಎಂ ಸಿದ್ದರಾಮಯ್ಯ ಅವರೇ ನೀವು, ಒಂದಲ್ಲ ಒಂದು ಸಾಂವಿಧಾನಿಕ ಸ್ಥಾನದಲ್ಲಿ ಇದ್ದೀರಿ, ನೀವು ಪ್ರಧಾನ ಪ್ರದೇಶದಲ್ಲಿ ನಿವೇಶನಗಳನ್ನು ಮಂಜೂರು ಮಾಡಿ ಅವುಗಳನ್ನು ಹಿಂದಿರುಗಿಸಿದ್ದೀರಿ, ಸೈಟ್‌ಗಳನ್ನು ಹಿಂದಿರುಗಿಸುವುದೇ ಅಪರಾಧಕ್ಕೆ ಸಾಕ್ಷಿಯಾಗಿದೆ ಎಂದು ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಮುಡಾ ಅಧ್ಯಕ್ಷ ಕೆ.ಮರೀಗೌಡ ಅವರ ರಾಜೀನಾಮೆಯನ್ನು ಏಕೆ ಅಂಗೀಕರಿಸಿದ್ದೀರಿ ಎಂದು ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ಗೌಡರು ನಿಮ್ಮ ನಿಕಟವರ್ತಿಯಾಗಿದ್ದರು. ಹಗರಣದ ಹೊಣೆಗಾರಿಕೆ ಅವರ ಮೇಲೆ ಹೊರಿಸಲು ನೀವು ಯೋಜಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಸಿಎಂ ರಾಜೀನಾಮೆಗೆ ಆಗ್ರಹ

“ಮುಡಾ ಹಗರಣ ಕುರಿತಂತೆ ರಾಜ್ಯಪಾಲರು 17ಎ ಅಡಿಯಲ್ಲಿ ನಿಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಇದನ್ನು ಪ್ರಶ್ನಿಸಿ ನೀವು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ವಿಶೇಷ ನ್ಯಾಯಾಲಯ ಸಹ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಲೋಕಾಯುಕ್ತ ಸಹ ತನಿಖೆ ಆರಂಭಿಸಿದೆ. ಇದರ ನಡುವೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿದ್ದು ಸಾಕಾಗುವುದಿಲ್ಲ ನೈತಿಕ ಹೊಣೆಹೊತ್ತು ನೀಡು ರಾಜಿನಾಮೆ ನೀಡಬೇಕು.”

– ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.