Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೆರವುಗೊಳಿಸಿದ ಶೆಡ್ ಕುಟುಂಬಗಳಿಗೆ ಪರಿಹಾರ ಕೋರಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ತೆರವುಗೊಳಿಸಿದ ಶೆಡ್ ಕುಟುಂಬಗಳಿಗೆ ಪರಿಹಾರ ಕೋರಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ತೆರವುಗೊಳಿಸಲಾದ ಶೆಡ್ ನ ನೊಂದ ದಲಿತ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ನಗರದ ಎಸ್‌ಸಿಎಸ್‌ಟಿ ಹಾಗೂ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿಗಳ ಮೂಲಕ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.
ತೆರವು ಜಾಗೆಯಿಂದ ಶುರುವಾದ ಪ್ರತಿಭಟನೆ ಪಟ್ಟಣದ ತಂಗಡಗಿ ಮುಖ್ಯ ರಸ್ತೆ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ಸಾಗಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಡಿಎಸ್‌ಎಸ್ ಮುಖಂಡ ಹರೀಶ ನಾಟೆಕಾರ ಮಾತನಾಡಿ, ದುಡಿದು ತಿನ್ನುವ ನಮ್ಮ ಜನರ ಮನೆಗಳನ್ನು ನೆಲಸಮ ಮಾಡಲಾಗಿದೆ ಈ ಘಟನೆಯನ್ನು ನಮ್ಮ ಸಂಘಟನೆ ಖಂಡಿಸುತ್ತದೆ. ನಿವಾಸಿಗಳ ಬಳಿ ಕೊಳಚೆ ಮಂಡಳಿ ನೀಡಿದ ಹಕ್ಕುಪತ್ರ, ನ್ಯಾಯಾಲಯದ ಸ್ಟೇ ಪ್ರತಿ ಇದ್ದರೂ ಕೂಡ ಯಾವುದನ್ನೂ ಲೆಕ್ಕಿಸಿಲ್ಲ. ಹುಡ್ಕೋ ಗೇಟ್ ಬಳಿ ಇರುವ ಬೆಂಗಳೂರು ಬೇಕರಿ ಕಿತ್ತದೇ ನಮ್ಮವರ ಮನೆಗಳನ್ನು ಕಿತ್ತಿದ ಇವರ ನಡವಳಿಕೆ ಎಸ್‌ಸಿಎಸ್‌ಟಿ ಜನಾಂಗದ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ತೋರಿಸಿ ಕೊಡುತ್ತಿದೆ. ಕೂಡಲೇ ತೆರವುಗೊಳಿಸಿದ ಎಲ್ಲ ನೊಂದ ಕುಟುಂಬಗಳಿಗೆ ಪರಿಹಾರವನ್ನು ಘೋಶಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವದಾಗಿ ಎಚ್ಚರಿಸಿದರು.
ಇದೇ ವೇಳೆ ಡಿಎಸ್‌ಎಸ್ ನ ಹಿರಿಯ ಮುಖಂಡ ಡಿ.ಬಿ.ಮುದೂರ, ಪ್ರಮುಖರಾದ ಪ್ರಕಾಶ ಸರೂರ, ದೇವರಾಜ ಹಂಗರಗಿ ಮತ್ತೀತರರು ಮಾತನಾಡಿ ಘಟನೆಯನ್ನು ಖಂಡಿಸಿದರು. ತಹಸೀಲ್ದಾರ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಪುರಸಭೆ ಸದಸ್ಯ ಶಿವಪ್ಪ ಶಿವಪೂರ, ಪರಶುರಾಮ ನಾಲತವಾಡ, ಪರಶುರಾಮ ಮುರಾಳ, ಬಲಭೀಮ ನಾಯಕಮಕ್ಕಳ, ಶೇಕು ಆಲೂರ ಸೇರಿದಂತೆ ಹಲವರು ಇದ್ದರು.

ನೆಲಸಮ ಮಾಡಲಾದ ಶೆಡ್ ಮನೆಗಳ ೩೫ಕುಟುಂಬಗಳಿಗೆ ತಲಾ ೩ಲಕ್ಷ ಪರಿಹಾರ ಧನ ವಿತರಿಸಬೇಕು. ನ್ಯಾಯಾಂಗ ನಿಂದನೆ ಮಾಡಿರುವ ಪುರಸಭೆ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿಯ ಮೇಲೆ ನ್ಯಾಯಾಂಗ ನಿಂದನೆ ಮತ್ತು ಎಸ್‌ಸಿಎಸ್‌ಟಿ ಕೇಸು ದಾಖಲಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.