Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕ್ಫ್ ಆಸ್ತಿ ನೋಟಿಸು: ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ
(ರಾಜ್ಯ ) ಜಿಲ್ಲೆ

ವಕ್ಫ್ ಆಸ್ತಿ ನೋಟಿಸು: ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: “ವಕ್ಫ್ ಆಸ್ತಿ ಎಂದು ನೋಟಿಸು ಬಂದಿರುವ ಹಿನ್ನೆಲೆಯಲ್ಲಿ ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ” ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ರವಿವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ತಿಕೋಟಾ ತಾಲೂಕಿನ ಹೊನವಾಡ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡುತ್ತಾರೆ ಎಂಬ ಆತಂಕದ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹೊನವಾಡದ ಕೆಲವು ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ. ಯಾವುದೇ ನೋಟಿಸ್ ಪಡೆದರೆ ಅದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸಾಕು. ಈಗಾಗಲೆ ಜಿಲ್ಲಾಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇನೆ. ಮುಂದಿನವಾರ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ, ಕೂಲಂಕುಷವಾಗಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಜನರು ಅನಗತ್ಯವಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ” ಎಂದರು.
ಹೊನವಾಡದ ರೈತರು ಮಾತನಾಡಿ, “ನಾಲ್ಕೈದು ತಲೆಮಾರಿನಿಂದ ಹೊನವಾಡದಲ್ಲಿ ಸಾಗುವಳಿ ಮಾಡುತ್ತಾ ಬಂದಿರುವ ನಾವು ನಮ್ಮ ಕಬ್ಜೆಯಲ್ಲಿರುವ 89 ಸರ್ವೇಗಳ ಜಮೀನುಗಳ 1200 ಎಕರೆ ಪ್ರದೇಶವು ವಕ್ಫ್ ಆಸ್ತಿ ಎಂದು ಜಿಲ್ಲಾ ವಕ್ಫ್ ಸಂಸ್ಥೆ ಹೇಳುತ್ತಿದ್ದು, ಸಚಿವರು ಮಧ್ಯ ಪ್ರವೇಶಿಸಿ ನ್ಯಾಯ ದೊರಕಿಸಿ ಕೊಡಬೇಕು” ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ, ಗ್ರಾಮಸ್ಥರಾದ ಬಸವರಾಜ ಪಾಂಡೆಗಾವಿ, ವಿಠ್ಠಲ ಚವಳಚಿ, ಭೀಮು ದೇವನಾಯಕ, ಮಹಾದೇವ ಜಾಧವ, ಬಾಪು ಮೊಳೆ, ಭೀರಪ್ಪ ಪಾಂಡೆಗಾವಿ, ವಿಠ್ಠಲ ಗಡದಿ, ಧರೇಪ್ಪ ತೊದಲಬಾಗಿ, ರಮೇಶ ನಾಟಿಕಾರ, ಮುತ್ತು ಹಿರೇಮಠ, ರವಿ ಟಕ್ಕಳಕಿ, ಲಕ್ಷ್ಮಣ ಕಾತ್ರಾಳ, ಸಾಬು ಕಾತ್ರಾಳ, ಸಚಿನ ಮಾನೆ, ಗುರುಸಿದ್ದ ಗೊಟ್ಯಾಳ, ಮಂಜು ಗೊಳಚಿ ಸೇರಿದಂತೆ ಮತ್ತಿತರಿದ್ದರು.
ಅಲ್ಲದೇ, ಉಪಸ್ಥಿತರಿದ್ದ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರಿಗೆ “ವಕ್ಫ್ ನೋಟಿಸು ಮತ್ತು ಸಂಬಂಧಿತ ಆಸ್ತಿಗಳ ಕುರಿತು ಸಂಪೂರ್ಣ ವಿವರಗಳನ್ನು ಮುಂದಿನ ಸಭೆಯಲ್ಲಿ ಒದಗಿಸುವಂತೆ” ಸಚಿವರು ಸೂಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.