ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಅಕ್ಟೋಬರ್ 21 ರಂದು ಸೋಮವಾರ ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಸೋಮವಾರ ಬೆ. 9 ಗಂಟೆಗೆ ಬಬಲೇಶ್ವರ ಪಟ್ಟಣದ ಈದ್ಗಾ ಮೈದಾನದ ಎದುರಿಗೆ ತಿಗಣಿ ಬಿದರಿ ರಸ್ತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 32 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ನಂತರ ಬೆಳಿಗ್ಗೆ 10 ಗಂಟೆಗೆ ಹೊಕ್ಕುಂಡಿ ಗ್ರಾಮದ ಅಗಸಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ನಂತರ ಬೆಳಿಗ್ಗೆ 11 ಗಂಟೆಗೆ ನಿಡೋಣಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಮತ್ತು ಪಿ.ಆರ್.ಇ.ಡಿ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿಡೋಣಿಯಿಂದ ತಿಗಣಿಬಿದರಿ ಗ್ರಾಮದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.
ಬಳಿಕ ಮಧ್ಯಾಹ್ನ 12 ಗಂಟೆಗೆ ಶೇಗುಣಸಿ ಗ್ರಾಮದ ಮಾರುತೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕರ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

