ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ‘ಪ್ರಸ್ತುತ ಸಾಮಾಜಿಕ ನೆಲೆಯಲ್ಲಿ ವಾಲ್ಮೀಕಿ ರಾಮಾಯಣ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇದೇ ದಿ.೨೨ ರಂದು ಮಧ್ಯಾಹ್ನ ೦೩:೦೦ ಗಂಟೆಗೆ ಕನ್ನಡ ಅಧ್ಯಯನ ವಿಭಾಗದ ಸಭಾಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋಪಾಲ್ ಎನ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕ ಸಂದೀಪ್ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

