Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮರೆಯಾದ ಮಾಣಿಕ್ಯ ಸಿದ್ದಲಿಂಗ ಶ್ರೀಗಳ ಅಚ್ಚಳಿಯ ನೆನಪು
(ರಾಜ್ಯ ) ಜಿಲ್ಲೆ

ಮರೆಯಾದ ಮಾಣಿಕ್ಯ ಸಿದ್ದಲಿಂಗ ಶ್ರೀಗಳ ಅಚ್ಚಳಿಯ ನೆನಪು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೋಂಟದಾರ್ಯ ಸ್ವಾಮೀಜಿ ಸಂಸ್ಕರಣಾ ದಿನ ಪ್ರಯುಕ್ತ ಹೆಜ್ಜೆ ಗುರುತುಗಳ ಒಂದು ಮೆಲುಕು

ಉದಯರಶ್ಮಿ ದಿನಪತ್ರಿಕೆ

– ಗುಲಾಬಚಂದ ಜಾದವ
ವಿಜಯಪುರ: ಗಟ್ಟಿ ಛಾತಿ,ಮೃದು ಹೃದಯದ ತೋಂಟದ ಲಿಂ, ಡಾ. ಸಿದ್ದಲಿಂಗ ಪೂಜ್ಯರು ಜಗಮನದಲ್ಲಿ ಸದಾ ಆಜರಾಮರು ! ಅದಕ್ಕೆ ಕಾರಣ ಶ್ರೀಗಳು ತಮ್ಮ ಜೀವಿತಾವಧಿಯಲ್ಲಿ ಬಸವ ತತ್ವದಡಿಯಲ್ಲಿ ಗೈದ ಸಮಾಜಪರ ಎಂದು ಮರೆಯಲಾಗದ ಅಭೂತಮಯ ಕಾಯಕಗಳು ! ಪದಗುಚ್ಛಗಳ ಮೂಲಕ ಈ ಕನ್ನಡ ಕುಲಗುರುವಿನ ವೈವಿಧ್ಯಮಯ ಕಾಯಕ ಪ್ರಜ್ಞೆಗಳನ್ನು ಸ್ಮರಿಸೋಣ ಬನ್ನಿ..!
ಶಿಕ್ಷಣ, ಆರೋಗ್ಯ ಸೇರಿದಂತೆ ಐದು ದಶಕಗಳಷ್ಟು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ತೋಂಟದಾರ್ಯ ಮಠದ ಶ್ರೀ ಡಾ.ಸಿದ್ದಲಿಂಗ ಸ್ವಾಮೀಜಿಯವರ ಸಂಸ್ಮರಣಾ ದಿನವಿದು. ಅಕ್ಟೋಬರ್. ೨೦ , ೨೦೧೮ರಂದು ಈ ಲೋಕವನ್ನಗಲಿದ ಸ್ವಾಮೀಜಿ ಅವರು ೭೬ ವರ್ಷ ಈ ಲೋಕದಲ್ಲಿ ನಡೆದಾಡಿದ್ದರು.
ಶ್ರೀಗಳು ಹಲವಾರು ದಶಕಗಳಿಂದ ಅನ್ನದಾಸೋಹ ನಡೆಸಿಕೊಂಡು ಬಡ ಮಕ್ಕಳ ಶ್ರೇಯೋಭಿವೃದ್ದಿಗೆ ಹೆಸರಾಗಿದ್ದರು. ತಾವು ಪೀಠಾಧಿಪತಿಗಳಾದ ನಂತರ ಗದಗ, ಹಾವೇರಿ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿಡಿದು, ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಶಾಖೆಗಳನ್ನು ಪ್ರಾರಂಭಿಸಿದ್ದರು.
ರಥೋತ್ಸವದ ಸಂದರ್ಭದಲ್ಲಿ ಸಾಹಿತ್ಯ, ಸಂಗೀತ, ಲಲಿತಕಲೆಗಳ ಅಭೂತಪೂರ್ವ ಸಂಗಮವಾಗಿ ಶ್ರೀಮಠ ಕಂಗೊಳಿಸುತ್ತಿತ್ತು. ವಿವಿಧ ಜಿಲ್ಲೆ, ನೆರೆಯ ರಾಜ್ಯಗಳಿಂದಲೂ ಸಾಹಿತಿಗಳು, ಕಲಾವಿದರು ಜಾತ್ರೆಯಲ್ಲಿ ಭಾಗವಹಿಸುತ್ತಿದ್ದರು. ತೋಂಟದಾರ್ಯ ಜಾತ್ರೆಯನ್ನು ಧಾರ್ಮಿಕ ಕಾರ್ಯಕ್ರಮಗಳ ಚೌಕಟ್ಟಿನಿಂದ ಹೊರತಂದು, ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಶವನ್ನು ತೋಂಟದ ಶ್ರೀಗಳು ನೀಡಿದ್ದರು. ನಾಗರ ಪಂಚಮಿಯಂದು ಹುತ್ತಕ್ಕೆ ಹಾಲೆರೆಯುವ ಬದಲು ಬಡಮಕ್ಕಳಿಗೆ ಹಾಲುಣಿಸುವುದು, ಪವಾಡ ಬಯಲು ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ಜನಮಾನಸದಲ್ಲಿ ಶ್ರೀಗಳು ವೈಚಾರಿಕ ಕ್ರಾಂತಿ ಮೂಡಲು ಶ್ರಮಿಸಿದ್ದರು.
ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸಾಂವಿಧಾನಿಕ ಮಾನ್ಯತೆ ಕೊಡುವಂತೆ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವಂತೆ, ನಂಜುಡಪ್ಪ ವರದಿ ಅನುಷ್ಠಾನಗೊಳಿಸುವಂತೆ, ಬೆಳಗಾವಿ ಗಡಿ ಸಮಸ್ಯೆ ಪರಿಹಾರಕ್ಕಾಗಿ, ಪೋಸ್ಕೊ ವಿರುದ್ಧದ ಗಟ್ಟಿಯಾದ ಹೋರಾಟ ಹಾಗೂ ಕಪ್ಪತಗುಡ್ಡಕ್ಕೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ತೋಂಟದ ಶ್ರೀಗಳ ನೇತೃತ್ವದಲ್ಲಿ ಪಟ್ಟುಬಿಡದೆ ನಡೆಸಿದ ನಿರಂತರ ಹೋರಾಟ ಮುಂತಾದವುಗಳಿಂದ ಸಹಾ ಶ್ರೀಗಳು ಜನಮಾನಸದಲ್ಲಿ ಅಚ್ಚಳಿಯದೆ ನಿಂತಿದ್ದಾರೆ.
ಈ ಮಹಾನ್ ಚೇತನಕ್ಕೆ ನಮೋನ್ನಮಃ

ಸಾಮಾಜಿಕ ನ್ಯಾಯಕ್ಕಾಗಿ ಶ್ರೀಗಳು ಸದಾ ಮುಂದು

ತೋಂಟದ ಸಿದ್ದಲಿಂಗ ಶ್ರೀಗಳು ಸಮಾಜದಲ್ಲಿದ್ದ ಜಾತೀಯತೆ, ಅಸಮಾನತೆ, ಅಸ್ಪೃಶ್ಯತೆ, ಮೇಲು-ಕೀಳು, ಮಹಿಳೆಯರು-ಪುರುಷರು ಎಂಬ ಬೇಧಭಾವಗಳ ವಿರುದ್ಧ ನಿರಂತರ ಹೋರಾಟ ನಡೆಸಿದ್ದರು. ಸಮಾಜದಲ್ಲಿ ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯಕ್ಕಾಗಿ ಶ್ರೀಗಳು ಯಾವಾಗಲು ಮುಂಚೂಣಿಯಲ್ಲಿರುತ್ತಿದ್ದರು.
ಕೇಂದ್ರ ಸರಕಾರದಿಂದ ರಾಷ್ಟ್ರೀಯ ಕೋಮು ಸೌಹಾರ್ದ ಪ್ರಶಸ್ತಿ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಶ್ರೀಗಳಿಗೆ ಸಂದಿದ್ದವು.
ಅಪಾರ ಪುಸ್ತಕ ಪ್ರಿಯರಾಗಿದ್ದ ಇವರು ಪುಸ್ತಕಗಳ ಸ್ವಾಮೀಜಿ ಎಂದು ಸಹ ಪ್ರಸಿದ್ಧರಾಗಿದ್ದರು.
ಸ್ವಾಮೀಜಿಯವರ ನೇತೃತ್ವದಲ್ಲಿ ಮಠದಲ್ಲಿ ಪ್ರತಿವಾರ ಆಯೋಜಿಸಲಾಗುತ್ತಿದ್ದ ಶಿವಾನುಭವ ಕಾರ್ಯಕ್ರಮ ಸಾಮಾಜಿಕ, ಆಧ್ಯಾತ್ಮಿಕ, ಧಾರ್ಮಿಕ, ಕೃಷಿ, ಗ್ರಾಮೀಣ, ಮಾನವಶಾಸ್ತ್ರದ ವಿಷಯಗಳ ಕುರಿತಾದ ಚರ್ಚೆಗಳಿಗೆ ಪ್ರಸಿದ್ಧವಾಗಿದ್ದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.