ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರರು ಸಿ.ಬಿ.ಚಿಕ್ಕಲಗಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಹಾಯಕ ಸಂಚಾರ ವ್ಯವಸ್ಥಾಪಕರು ಜೆ,ಕೆ. ಹುಗ್ಗೆನ್ನವರ್, ಕಾರ್ಮಿಕ ಇಲಾಖೆಯ ಸಜ್ಜನ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

