ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ೨೦೨೪-೨೫ ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನಡೆಸಲಾಗುವ ಸಹಪಠ್ಯ ಚಟುವಟಿಕೆ ಸ್ಪರ್ದೆಗಳನ್ನ ಅ.೨೫ ರಂದು ಬೆಳಿಗ್ಗೆ ೧೦:೩೦ ಕ್ಕೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಸ್ಪರ್ದೆಯಲ್ಲಿ ಭಾಗವಹಿಸಲು ಅರ್ಹರಿರುವದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
