ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗೋ ಸಂಪತ್ತು ದೇಶದ ಸಂಪತ್ತು. ಆದ್ದರಿಂದ ಪಶು ಇಲಾಖೆ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಪ್ರತಿ ಜಾನುವಾರಗಳಿಗೆ ಲಸಿಕೆ ಹಾಕಿ ಅವುಗಳನ್ನು ಕಾಪಾಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದರು.
ಅವರು ಸೋಮವಾರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿರುವ ಗೋಶಾಲೆಯಲ್ಲಿ ಗೋಪೂಜೆ ಮಾಡುವ ಮೂಲಕ ಅ.೨೧ ರಿಂದ ನ.೨೧ ರವರೆಗೆ ರಾಷ್ಟ್ರೀಯ ಕಾರ್ಯಕ್ರಮವಾದ ಕಾಲು ಬಾಯಿ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಅಶೋಕ ಘೊಣಸಗಿ ಉಪಸ್ಥಿತರಿದ್ದರು.
ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಿ.ಎಸ್.ಕನಮಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ವೇಳೆ ಹಿರಿಯ ಪಶು ವೈದ್ಯಾಧಿಕಾರಿ ಡಾ.ಬಾಳಾಸಾಹೇಬ ಬಂಡಿ ಹಾಗೂ ಇಲಾಖೆ ಸಿಬ್ಬಂದಿ ಇದ್ದರು.

