ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನಲ್ಲಿ ರಕ್ತವಿಸ್ರಾವಿಯ ಉಚಿತ ಚಿಕಿತ್ಸೆ ಶಿಬಿರ ಮೂರು ದಿನಗಳ ಕಾಲ ನಡೆಯಲಿದೆ.
ಅಕ್ಟೋಬರ್ 24 ರಿಂದ ಅಕ್ಟೋಬರ್ 26ರ ವರೆಗೆ ಈ ಶಿಬಿರ ನಡೆಯಲಿದ್ದು, ಉಬ್ಬಿರುವ ರಕ್ತನಾಳಗಳು(Varicose Veins) ಮತ್ತು ಚರ್ಮಗತ ವಿಕಾರಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಕಾಲೇಜಿನ ಪ್ರಾಚಾರ್ಯರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ನ್ನು ಸಂಪರ್ಕಿಸಬಹುದಾಗಿದೆ.
