ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಿತ್ತು. ಆದರೀಗ ಅಧಿಕಾರಿಗಳ, ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷತನದಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರು ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರುಗಳು ತಾಲೂಕಿಗೆ ಬಂದಿರುವ ಮೌಲಾನ ಆಜಾದ್ ಮಾದರಿ ಶಾಲೆಯನ್ನು ಬೇರೆ ಕಡೆಗೆ ಮಂಜೂರಾತಿಯನ್ನು ಪಡದಿರುವುದನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ.
ಮತಕ್ಷೇತ್ರದಲ್ಲಿ ೪೦ ಸಾವಿರಕಿಂತಲೂ ಹೆಚ್ಚು ಅಲ್ಪಸಂಖ್ಯಾತ ಮತದಾರರು ಇದ್ದಾರೆ. ಅದರಲ್ಲೂ ತುಂಬಾ ಬಡತನದ ಜೀವನ ಸಾಗಿಸುವ ಕುಟುಂಬಗಳ ಸಂಖ್ಯೆ ಹೆಚ್ಚಾಗಿದ್ದು ಅವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಲವಾರು ದಶಕಗಳಿಂದ ವಂಚಿತರಾಗಿದ್ದಾರೆ. ಅಂತ ಕುಟುಂಬಗಳ ಮಕ್ಕಳು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದು ನಾಡಿನ ಮತ್ತು ದೇಶದ ಸಂಪನ್ಮೂಲ ನಾಗರಿಕರಾಗುವುದನ್ನು ತಪ್ಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ. ಈ ಕೂಡಲೇ ರಾಜ್ಯ ಸರ್ಕಾರ ಶಾಲೆಯನ್ನು ಮಂಜೂರಾತಿ ಮಾಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧರಣಿ, ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಹಮೀದ್ ಅಬ್ದುಲ್ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಇತರರು ಇದ್ದರು.

