Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ಧರಾಮಯ್ಯರಿಂದ ಲಿಂಗಾಯತರಿಗೆ ಅವಮಾನ :ಯತ್ನಾಳ
(ರಾಜ್ಯ ) ಜಿಲ್ಲೆ

ಸಿದ್ಧರಾಮಯ್ಯರಿಂದ ಲಿಂಗಾಯತರಿಗೆ ಅವಮಾನ :ಯತ್ನಾಳ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿದ್ರಾಮಯ್ಯ ಲಿಂಗಾಯತರ ಕ್ಷಮೆ ಯಾಚಿಸಲು ಆಗ್ರಹ | ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲು ಸವಾಲು

ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಠರು ಎಂದು ಆರೋಪಿಸುವ ಮೂಲಕ ಅವಮಾನಿಸಿದ್ದು ಅಕ್ಷಮ್ಯ ಅಪರಾಧ. ಇದಕ್ಕಾಗಿ ಅವರು ಕೂಡಲೇ ಲಿಂಗಾಯತರ ಕ್ಷಮೆ ಯಾಚಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಭಾನುವಾರ ವಿಜಯಪುರದ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲಿಂಗಾಯತರೆಲ್ಲರೂ ಭ್ರಷ್ಟರು ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ ಮತ್ತು ವೈಯಕ್ತಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಇಡೀ ಲಿಂಗಾಯತ ಸಿಎಂ ಗಳು ಭ್ರಷ್ಟರು ಎಂಬುದು ಎಷ್ಟು ಸರಿ? ಧರ್ಮ ಒಡೆಯಲು ನಿಂತವರಿಗೆ ಕಳೆದ ಬಾರಿ ಪಾಠ ಕಲಿಸಿದ್ದಾರೆ. ಹೀಗಾಗಿಯೇ ಕಳೆದ ಚುನಾವಣೆಯಲ್ಲಿ ಲಿಂಗಾಯತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಿದ್ರಾಮಯ್ಯ ಅವರು ನೀಡಿರುವ ಹೇಳಿಕೆಯಿಂದ ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ಅಪಮಾನವಾಗಿದೆ. ಲಿಂಗಾಯತರನ್ನು ಒಡೆಯುವುದು, ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದಾಗಲಿ ಆಗಬಾರದು. ಈ ಕೂಡಲೇ ಸಿದ್ರಾಮಯ್ಯನವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಡಾ. ಅಂಬೇಡ್ಕರ್ ಅವರಿಗೆ ದೆಹಲಿಯಲ್ಲಿ ಅಂತ್ಯಕ್ರಿಯೆಗೆ ಜಾಗ ನೀಡಲಿಲ್ಲ. ಕಾಂಗ್ರೆಸ್ ಸರಕಾರ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ. ಬದಲಾಗಿ ಕಾಂಗ್ರೆಸ್ ನಾಯಕರೇ ಸ್ವತಃ ಪ್ರಶಸ್ತಿ ಪಡೆದಿದ್ದಾರೆ. ಆದರೆ, ಬಿಜೆಪಿ ಸೇರಿದಂತೆ ಜನತಾ ಪರಿವಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ ಲಿಂಗಾಯಿತ ಡ್ಯಾಂ ಒಡೆಯುತ್ತೇವೆ ಎಂದು ಹೇಳಿದ್ದಾರೆ. ಅವರು ಲಿಂಗಾಯಿತ ಡ್ಯಾಂ ಒಡೆಯುವುದು ಒತ್ತಟ್ಟಿಗಿರಲಿ ಅದರ ಒಂದು ಚಿಪ್ಪುಕಲ್ಲು ತೆಗೆಯುದಾಗೊಲ್ಲ ಎಂದು ವ್ಯಂಗ್ಯವಾಡಿದರು.
ಹೊಸದಾಗಿ ಪ್ರಕಟಿಸಲಾಗಿರುವ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳುತ್ತೀರಿ. ನಿಮ್ಮಲ್ಲಿ ತಾಕತ್ ಇದ್ರೆ, ಧಮ್ ಇದ್ರೆ ಇನ್ನೊಮ್ಮೆ ಈ ಮಾತನ್ನು ಹೇಳಿ ನೋಡಿ ಎಂದು ಸವಾಲು ಹಾಕಿದ ಅವರು ಮೇ 10 ರಂದು ಕಾಂಗ್ರೆಸ್ಸಿಗೆ ಮತದಾರರು ಕೊನೆಯ ಮೊಳೆ ಹೊಡಿಯಲಿದ್ದಾರೆ ಎಂದರು.
ಕಾಂಗ್ರೆಸ್ ಲಿಂಗಾಯಿತ ವಿಚಾರವನ್ನು ಮುನ್ನೆಲೆಗೆ ತಂದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಂದೆಡೆ ಎಲ್ಲಾ ಮಠಾಧೀಶರ ಬಳಿಗೆ ಹೋಗುತ್ತಿದ್ದೀರಿ. ಸ್ವಾಮೀಜಿಗಳ ಕಾಲು ಹಿಡಿದು ಸಹಾಯ ಮಾಡಿ ಅಂತೀರಿ. ಈಗ್ಯಾಕೆ ಹೋಗುತ್ತಿದ್ದೀರಿ? ಮೊದಲು ದರ್ಗಾಕ್ಕೆ ಹೋಗುತ್ತಿದ್ದೀರಿ. ಈಗ್ಯಾಕೆ ಸ್ವಾಮೀಜಿಗಳ ಬಳಿ ಹೋಗುತ್ತಿದ್ದೀರಿ? ಧಮ್ ಇದ್ರೆ, ತಾಕತ್ ಇದ್ರೆ ಕಾಂಗ್ರೆಸ್ ನವರು ಲಿಂಗಾಯಿತ ಸಿಎಂ ಘೋಷಣೆ ಮಾಡಲಿ ಎಂದು ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ಸಿಗೆ ಸವಾಲು ಹಾಕಿದರು.

ಶೆಟ್ಟರ, ಸವದಿ ಪಕ್ಷೇತರ ಸ್ಪರ್ಧಿಸಬೇಕಿತ್ತು

ಮಾಜಿ ಸಿಎಂ ಜಗದೀಶ ಶೆಟ್ಟರ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ಅವರು, ಅವರೀರ್ವರಿಗೆ ಬಿಜೆಪಿಯಲ್ಲಿ ಏನು ಅನ್ಯಾಯ ಆಗಿದೆ ಅಂತ ಹೋದ್ರು? ಪಕ್ಷ ಅವರಿಗೆ ಎಲ್ಲ ಅಧಿಕಾರ ಕೆಟ್ಟಿತ್ತು. ಕಾಂಗ್ರೆಸ್ ಗೋಹತ್ಯೆ ಕಾಯ್ದೆ, ಮೀಸಲಾತಿ ತೆಗಿತೀವಿ ಅಂತಾರೆ, ಶೆಟ್ಟರೇ, ಸವದಿಯವರೆ ನಿಮಗೆ ಒಪ್ಪಿಗೆ ಇದೆಯಾ? ತಾಕತ್ ಇದ್ರೆ ನೀವು ಸ್ವತಂತ್ರವಾಗಿ ನಿಲ್ಲಬೇಕಿತ್ತು ಎಂದು ಶಾಸಕ ಯತ್ನಾಳ ಛೇಡಿಸಿದರು.

ಏ.29 ರಂದು ಮೋದಿ ವಿಜಯಪುರಕ್ಕೆ ಭೇಟಿ

ಇದೇ ವೇಳೆ ಏ.29 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರಕ್ಕೆ ಪ್ರಚಾರಕ್ಕೆ ಬರುತ್ತಾರೆ. ಅಂದು ಮಧ್ಯಾಹ್ನ 2ಕ್ಕೆ ವಿಜಯಪುರ ನಗರದಲ್ಲಿ ಪ್ರಧಾನಿಯವರ ಕಾರ್ಯಕ್ರಮ ಇದೆ. ಮೋದಿ ಬಂದ ಮೇಲೆ ಮತ್ತೆ 30 ರಿಂದ 40 ಹೆಚ್ಚಿಗೆ ಸೀಟುಗಳು ಬರುತ್ತವೆ. ಈ ಬಾರಿ ಕಾಂಗ್ರೆಸ್ 60 ರಿಂದ 70 ಸೀಟ್ ಬರುತ್ತವೆ. ಬಿಜೆಪಿ 140 ರಿಂದ 150 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರಾಹುಲ ಗಾಂಧಿ ಕೂಡಲ ಸಂಗಮ ಭೇಟಿ ನೀಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಹುಲ ಗಾಂಧಿ ಅವರನ್ನು ಸುಮ್ಮನೆ ಕರೆದುಕೊಂಡು ಬರುತ್ತಾರೆ. ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸ್ ಗೆ ಅವನತಿ ಖಚಿತ ಎಂದು ವ್ಯಂಗ್ಯವಾಡಿದರು.
ಚಿತ್ರನಟ ಸುದೀಪ ಸೇರಿದಂತೆ ಸ್ಟಾರ್ ಪ್ರಚಾರಕರು ವಿಜಯಪುರಕ್ಕೆ ಬರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈಗಾಗಲೇ ನಮ್ಮ ನಾಯಕರಿಗೆ ಹೇಳಿದ್ದೇನೆ. ನನಗೆ ಪ್ರಧಾನಿ, ಅಮೀತ್ ಶಾ ಟಿಪಿ ಸಾಕು. ಯಾವುದೇ ಸಿನಿಮಾ ನಟರು ನನಗೆ ಬೇಡ. ಚಿತ್ರನಟರಿಗಿಂತಲೂ ನಾನೇನು ಕಡಿಮೆ ಇಲ್ಲ. ಡೈರೆಕ್ಟರ್, ಆಕ್ಟರ್, ಕಥಾ ಸಂಕಲನ ಎಲ್ಲ ನಾನೇ ಮಾಡ್ತಿನಿ ಎಂದು ಶಾಸಕ ಯತ್ನಾಳ ನಗೆಯುಕ್ಕಿಸಿದರು.

basanagouda patil yatnal BIJAPUR NEWS public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.